ಮೂವರು ಡ್ರಗ್ಸ್‌ ಪೆಡ್ಲರ್‌ ಬಂಧನ: 1,650 ಗ್ರಾಂ ಗಾಂಜಾ ಜಪ್ತಿ

| N/A | Published : Jul 28 2025, 02:03 AM IST / Updated: Jul 28 2025, 08:25 AM IST

KSRP

ಸಾರಾಂಶ

ನಗರದ ಉತ್ತರ ವಿಭಾಗದ ಪೊಲೀಸರು ಮಾದಕ ವಸ್ತು ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಮೂವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿ 1 ಕೆ.ಜಿ. 650 ಗ್ರಾಂ ಗಾಂಜಾ ಮತ್ತು 150 ಗ್ರಾಂ ಹ್ಯಾಶಿಸ್‌ ಆಯಿಲ್‌ ಜಪ್ತಿ ಮಾಡಿದ್ದಾರೆ.

  ಬೆಂಗಳೂರು :  ನಗರದ ಉತ್ತರ ವಿಭಾಗದ ಪೊಲೀಸರು ಮಾದಕ ವಸ್ತು ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಮೂವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿ 1 ಕೆ.ಜಿ. 650 ಗ್ರಾಂ ಗಾಂಜಾ ಮತ್ತು 150 ಗ್ರಾಂ ಹ್ಯಾಶಿಸ್‌ ಆಯಿಲ್‌ ಜಪ್ತಿ ಮಾಡಿದ್ದಾರೆ.

ಮಾದಕ ವಸ್ತು ಮಾರಾಟ ಆರೋಪದಡಿ ಎನ್‌ಡಿಪಿಎಸ್‌ ಕಾಯ್ದೆಯಡಿ ಎರಡು ಪ್ರಕರಣ ಮತ್ತು ಮಾದಕವಸ್ತು ಸೇವನೆ ಆರೋಪದಡಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ವಿಭಾಗದ ಡಿಸಿಪಿ ಬಿ.ಎಸ್‌. ನೇಮಗೌಡ ಅವರ ಮಾರ್ಗದರ್ಶನದಲ್ಲಿ ವಿಭಾಗದ 13 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ತಮ್ಮ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕವಸ್ತು ಮಾರಾಟ ಮಾಡುವ ಪ್ರಕರಣಗಳಲ್ಲಿನ ವ್ಯಕ್ತಿಗಳು, ಸೇವನೆ ಮಾಡುವವರು, ಅನುಮಾನಾಸ್ಪದ ವ್ಯಕ್ತಿಗಳು ಸೇರಿದಂತೆ ಒಟ್ಟು 106 ಮಂದಿ ವ್ಯಕ್ತಿಗಳನ್ನು ಪರಿಶೀಲಿಸಿದ್ದಾರೆ. ಡ್ರಗ್ಸ್‌ ಪೆಡ್ಲರ್‌ಗಳ ಚಲನವಲನ, ಪ್ರಸ್ತುತ ಅವರ ಕೆಲಸಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಈ ಹಿಂದೆ ದಾಖಲಾದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಬಗ್ಗೆ ಹಾಗೂ ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗದೆ ವಾರೆಂಟ್‌, ಪ್ರೊಕ್ಲಮೇಷನ್ ಆಗಿರುವ ಬಗ್ಗೆ ಪರಿಶೀಲಿಸಿದ್ದಾರೆ.

ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Read more Articles on