ಸಾರಾಂಶ
ಮಂಡ್ಯ : ಸಾಲಭಾದೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ 2 ದಿನಗಳ ಬಳಿಕ ಮೃತ ದಂಪತಿ ಪುತ್ರಿ ಲಕ್ಷ್ಮಿ (18) ಮೃತದೇಹ ಪತ್ತೆಯಾಗಿದೆ.
12 ಲಕ್ಷ ರು. ಸಾಲ ಮಾಡಿದ್ದ ಮಾಸ್ತಪ್ಪ ಸಾಲಗಾರರ ಕಿರುಕುಳದಿಂದ ಬೇಸತ್ತು ಶ್ರೀರಂಗಪಟ್ಟಣದ ಗಂಜಾಂನ ಒಂದೇ ಕುಟುಂಬದ ಮೂವರು ಸೋಮವಾರ ತಾಲೂಕಿನ ಯಲಿಯೂರು ಬಳಿಯ ವಿಸಿ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಘಟನೆಯಲ್ಲಿ ಮಾಸ್ತಪ್ಪ, ಪತ್ನಿ ರತ್ನಮ್ಮ ಅವರ ಮೃತದೇಹ ಪತ್ತೆಯಾಗಿತ್ತು. ಆದರೆ, ಪುತ್ರಿ ಲಕ್ಷ್ಮಿ ಅವರ ಮೃತದೇಹ ಪತ್ತೆಯಾಗಿರಲಿಲ್ಲ. ಕಳೆದ ಎರಡು ದಿನಗಳಿಂದ ಲಕ್ಷ್ಮಿ ಶವಕ್ಕಾಗಿ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದರು. ಬುಧವಾರ ಲಕ್ಷ್ಮಿ ಮೃತದೇಹ ಪತ್ತೆಯಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಮಳವಳ್ಳಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.
ತಾಲೂಕಿನ ಕಣಗಲು ಬಳಿ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಭಾನುವಾರ ನಡೆದ ಬೈಕ್ ಅಪಘಾತದಲ್ಲಿ ತಾಲೂಕಿನ ನಾರಾಯಣಪುರ ಗ್ರಾಮದ ಗುರುಮಲ್ಲಪ್ಪ (70) ಗಾಯಗೊಂಡಿದ್ದರು. ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.
ಫೆ.23ರಂದು ತಮ್ಮ ಬೈಕ್‌ನಲ್ಲಿ ಪುತ್ರನನ್ನು ಪಟ್ಟಣದ ಸಾರಿಗೆ ಬಸ್ ನಿಲ್ದಾಣಕ್ಕೆ ಬಿಟ್ಟು ವಾಪಸ್ ನಾರಾಯಣಪುರಕ್ಕೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-209ರ ಕಣಗಲು ಬಳಿ ರಾಷ್ಟ್ರೀಯ ಹಿಂಬದಿಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುರುಮಲ್ಲಪ್ಪ ಅವರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೆಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.