ಸಾರಾಂಶ
ಸಹೋದರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶ್ರೀರಂಗಪಟ್ಟಣ- ಕೆಆರ್‌ಎಸ್ ರಸ್ತೆಯ ಪಾಲಹಳ್ಳಿ ಬಳಿ ನಡೆದಿದೆ.
ಶ್ರೀರಂಗಪಟ್ಟಣ: ಸಹೋದರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶ್ರೀರಂಗಪಟ್ಟಣ- ಕೆಆರ್‌ಎಸ್ ರಸ್ತೆಯ ಪಾಲಹಳ್ಳಿ ಬಳಿ ನಡೆದಿದೆ.
ತಾಲೂಕಿನ ಹುಲಿಕೆರೆ ಗ್ರಾಮದ ಮಹದೇವು ಪುತ್ರ ಕೌಶಿಕ್ (18) ಮೃತಪಟ್ಟ ಯುವಕ. ಈತನ ಸಹೋದರ ಪವನ್ (13) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತ ಕೌಶಿಕ್ ಮೈಸೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಈತನ ಸಹೋದರ ಬೆಳಗೊಳ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದನು. ಶಾಲೆಯಿಂದ ಕರ್ನಾಟಕ ದರ್ಶನಕ್ಕೆ ಪ್ರವಾಸ ಹೋಗಲು ಗುರುವಾರ ಬೆಳಗ್ಗೆ ನಿಗದಿಯಾಗಿತ್ತು. ಸಹೋದರ ಪವನನ್ನು ಪಟ್ಟಣದ ಬಿಇಒ ಕಚೇರಿ ಬಳಿ ಪ್ರವಾಸಿ ವಾಹನ ಇರುವ ಹಿನ್ನೆಲೆ ಗ್ರಾಮದಿಂದ ಬೈಕ್‌ನಲ್ಲಿ ಕರೆದುಕೊಂಡು ಬರುವಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸ್ಥಳದಲ್ಲಿ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಶ್ರೀರಂಗಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತ ಯುವಕನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿ, ಗಂಭೀರವಾಗಿ ಗಾಯಗೊಂಡ ಮೃತನ ಸಹೋದರರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ಠಾಣೆಯಲ್ಲಿ ದಾಖಲಿಸಿಕೊಂಡಿದ್ದಾರೆ.
ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆಶ್ರೀರಂಗಪಟ್ಟಣ: ನೇಣು ಬಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೆ.ಶೆಟ್ಟಹಳ್ಳಿ ಗಾರ್ಮೆಂಟ್ ಬಳಿ ನಡೆದಿದೆ. ಸುಮಾರು 55 ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. ಮೃತಪಟ್ಟ ವ್ಯಕ್ತಿಯ ವಾಸುದಾರರು ಇದ್ದರೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಬಿ.ಜಿ.ಕುಮಾರ್ 9480804875 ಹಾಗೂ ಎಸ್ ಐ ಕುಮಾರ್ ಮೊ.9844325853 ಸಂಪರ್ಕಿಸಬಹುದು.