ಅಕ್ರಮವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಅಧಿಕಾರಿಗಳು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಅಕ್ರಮವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಅಧಿಕಾರಿಗಳು ಬಂಧಿಸಿದ್ದಾರೆ.

ಕೇರಳ ಮೂಲದ ಜೀಜು ಪ್ರಸಾದ್‌ ಮತ್ತು ಅಶ್ಚಿನ್‌ ಸ್ಯಾಮ್ಯೂವೆಲ್‌ ಬಂಧಿತರು. ಆರೋಪಿಗಳು ಇತ್ತೀಚೆಗೆ ಎಲೆಕ್ಟ್ರಾನಿಕ್‌ ಸಿಟಿಯ ಡಿ ಮಾರ್ಟ್‌ ಹಿಂಭಾಗದ ಭೀಮಸಂದ್ರದಲ್ಲಿ ಪರಿಚಿತರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಕಡಿಮೆ ಬೆಲೆಗೆ ಬೇರೆ ಕಡೆ ಹೈಡ್ರೋ ಗಾಂಜಾ ಖರೀದಿಸಿ ನಗರಕ್ಕೆ ತಂದು ವಾಟ್ಸಾಪ್‌ ಸೇರಿ ಇತರೆ ಮಾರ್ಗಗಳಿಂದ ಪರಿಚಿತ ಗಿರಾಕಿಗಳನ್ನು ಸಂಪರ್ಕಿಸಿ ದುಬಾರಿ ಬೆಲೆಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.