ಕಾರೊಂದು ವೇಗವಾಗಿ ಚಲಿಸುವ ವೇಳೆ ಕಾರಿನ ಚಕ್ರ ಗುಂಡಿಗೆ ಇಳಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ದಾಬಸ್ಪೇಟೆ
ಕಾರೊಂದು ವೇಗವಾಗಿ ಚಲಿಸುವ ವೇಳೆ ಕಾರಿನ ಚಕ್ರ ಗುಂಡಿಗೆ ಇಳಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.ಬೆಂಗಳೂರಿನ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳಾದ ಜಾನವಿ (19), ವೈಷ್ಣವಿ (19) ಸಾವನ್ನಪ್ಪಿದ್ದಾರೆ. ಗಗನ್, ಜಶ್ವಂತ್, ಹರ್ಷಿಣಿ.ಎಸ್, ಹರ್ಷಿಶಿ.ಜಿ ಎಂಬ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಘಟನಾ ವಿವರ: ಅಪಘಾತದಲ್ಲಿ ಮೃತಪಟ್ಟ ಇಬ್ಬರು ಹಾಗೂ ಗಾಯಗೊಂಡಿರುವ ನಾಲ್ವರು ಒಟ್ಟು ಆರು ವಿದ್ಯಾರ್ಥಿಗಳು, ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು, ಕಾಲೇಜಿನಿಂದ ಪ್ರಾಜೆಕ್ಟ್ ವರ್ಕ್ ಮೇಲೆ ಕುಣಿಗಲ್ ಬಳಿಯ ಉತ್ತರಿ ಬೆಟ್ಟಕ್ಕೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಾದ ಗಗನ್, ಜಶ್ವಂತ್ರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಹರ್ಷಿಣಿ ಎಸ್, ಹರ್ಷಿಣಿ ಜಿ ಎಂಬ ಗಾಯಾಳುಗಳಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕಾಲೇಜಿನ ವಿರುದ್ಧ ಕುಟುಂಬಸ್ಥರ ಆಕ್ರೋಶ: ಬೆಂಗಳೂರು ಸಪ್ತಗಿರಿ ಕಾಲೇಜಿನವರು ಈ ವಿದ್ಯಾರ್ಥಿಗಳನ್ನು ಕಾಲೇಜಿನಿಂದಲೇ ಪ್ರಾಜೆಕ್ಟ್ ವರ್ಕ್ಗಾಗಿ ವಿದ್ಯಾರ್ಥಿಗಳನ್ನು ತಂಡಗಳನ್ನಾಗಿ ಮಾಡಿ ಕುಣಿಗಲ್ ಬಳಿಯ ಉತ್ತರಿ ಬೆಟ್ಟಕ್ಕೆ ಪ್ರಾಜೆಕ್ಟ್ ವರ್ಕ್ ಮಾಡಲು ಕಳಿಸಿದ್ದರು. ಕಾಲೇಜಿನವರು ವಿದ್ಯಾರ್ಥಿಗಳನ್ನು ಕಳಿಸಿಕೊಟ್ಟ ಮೇಲೆ ಕಾಲೇಜಿನಿಂದಲೇ ವಾಹನದ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳನ್ನು ಕಳಿಸಬೇಕಿತ್ತು ಆದರೆ ವಾಹನ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಈ ಅವಘಡ ಸಂಬಂಧಿಸಿದ್ದು, ನಮ್ಮ ಮಕ್ಕಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಪೋಷಕರು ಆಕ್ರೋಶ ಹೊರಹಾಕಿದರು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.