ಸಾರಾಂಶ
ಪಾಂಡವಪುರ : ಹೊಟ್ಟೆನೋವು ತಾಳಲಾರದೆ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಗ್ರಾಮದ ನಿವಾಸಿ ಟಿಎಪಿಸಿಎಂಎಸ್ ನಿರ್ದೇಶಕ, ವಕೀಲ ಕಣಿವೆ ಯೋಗೇಶ್ ಪುತ್ರಿ ಗೌತಮಿ (21) ಮೃತ ಯುವತಿ.
ಮೃತ ಯುವತಿ ಗೌತಮಿಗೆ ಪದೇಪದೇ ಹೊಟ್ಟೆನೋವು ಬರುತ್ತಿತ್ತು ಎನ್ನಲಾಗಿದೆ. ಹಲವೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದರು ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗೌತಮಿ ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು. ಕಣಿವೆಕೊಪ್ಪಲು ಗ್ರಾಮದ ಹೊರವಲಯದ ಸ್ವಜಮೀನಿನಲ್ಲಿ ಸೋಮವಾರ ಸಂಜೆ ಅಂತ್ಯಸಂಸ್ಕಾರ ನಡೆಯಿತು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಲಾರಿಮಾಲೀಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಭೇಟಿಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಡಾ.ಎಂ.ಎಸ್.ಚಲುವರಾಜು ನಿಧನ
ಮಂಡ್ಯ:ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ಎಸ್.ಚಲುವರಾಜು (44) ಮೈಸೂರಿನ ಆಸ್ಪತ್ರೆಯಲ್ಲಿ ಸೋಮವಾರ ಹೃದಯಾಘಾತದಿಂದ ನಿಧನರಾದರು. ಮಂಡ್ಯ ತಾಲೂಕು ಮಾರಗೌಡನಹಳ್ಳಿ ಗ್ರಾಮದವರಾದ ಚಲುವರಾಜುಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಪ್ರಸ್ತುತ ಮಂಡ್ಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
2024 ರಲ್ಲಿ ನಡೆದ ಚುನಾವಣೆಯಲ್ಲಿ ಸ್ವೀಪ್ ಸಮಿತಿಯ ಜಿಲ್ಲಾ ರಾಯಭಾರಿಯಾಗಿ ನೇಮಕಗೊಂಡು ಮತದಾನದ ಜಾಗೃತಿ ಮೂಡಿಸಿದ್ದರು. ಅಲ್ಲದೇ,2012 ರಲ್ಲಿ ಜಪಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ವಿಕಲಚೇತನರ ಮಹಾಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಬಂಧ ಮಂಡಿಸಿದ್ದರು. ರಾಜ್ಯ ಸರ್ಕಾರ2022 ರಲ್ಲಿ ವಿಕಲಚೇತನರ ಶ್ರೇಷ್ಠ ಸಂಘಟನೆಗಾಗಿ ನೀಡುವ ಪ್ರಶಸ್ತಿಗೆ ಭಾಜನರಾಗಿದ್ದರು. ಅಂಗವಿಕಲರ ಸಮಸ್ಯೆಗಳ ಕುರಿತ ಪ್ರೌಢ ಪ್ರಬಂಧಕ್ಕೆ 2022 ರಲ್ಲಿ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಮೃತ ಚಲುವರಾಜು ಅವರ ಸ್ವಗ್ರಾಮ ಮಾರಗೌಡನಹಳ್ಳಿಯಲ್ಲಿ ಮಂಗಳವಾರ (ಜು.೨) ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.