ಸಾರಾಂಶ
ವೀಣಾ ಕಾಶಪ್ಪನವರ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ, ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಸೋಮವಾರ ಸಿಂದಗಿ ಕಡೆಗೆ ಹೊರಟಿದ್ದ ವೇಳೆ ನಡೆದ ಕಾರು ಅಪಘಾತದಲ್ಲಿ ಬಾಗಲಕೋಟೆ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಗಾಯಗೊಂಡಿದ್ದು, ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ, ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮುದ್ದೇಬಿಹಾಳ ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಕೂಡ ಜೊತೆಗಿದ್ದರು.ಯಾವುದೇ ಗಂಭೀರ ಗಾಯಗಳಾಗಿಲ್ಲ, ಎಡಗೈಗೆ ಸ್ವಲ್ಪ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಬೈಕ್ ಸವಾರ ಅಡ್ಡ ಬಂದಿದ್ದು, ಡಿಕ್ಕಿ ತಪ್ಪಿಸಲು ಹೋಗಿ ಏಕಾಏಕಿ ಬ್ರೇಕ್ ಹಾಕಿದಾಗ ಕಾರಿನ ಏರ್‌ಬ್ಯಾಗ್ ಸಿಡಿದಿದೆ. ಇದರಿಂದ ವೀಣಾ ಅವರ ಕೈಗೆ ಗಾಯವಾಗಿದೆ. ಮಂಗಳವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.