ಅಪ್ರಾಪ್ತರ ಆಶ್ಲೀಲ ವಿಡಿಯೋ ವೀಕ್ಷಣೆ : ಕಾವಲುಗಾರ ಸೆರೆ

| Published : Apr 18 2024, 02:18 AM IST / Updated: Apr 18 2024, 05:31 AM IST

WOMAN ARREST

ಸಾರಾಂಶ

ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್‌ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು :  ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್‌ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ ಬಂಧಿತನಾಗಿದ್ದು, ಆರೋಪಿಯಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಈತನ ಬಗ್ಗೆ ಗೃಹ ಇಲಾಖೆಯ ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿಂಗಳ ಹಿಂದಷ್ಟೇ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ನೂರ್‌, ನಗರದ ಖಾಸಗಿ ಬ್ಯಾಂಕ್‌ವೊಂದರ ಕಾವಲುಗಾರನಾಗಿ ನೇಮಕಗೊಂಡಿದ್ದ. ಪೋರ್ನ್‌ ವೆಬ್‌ಸೈಟ್‌ಗಳಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ಡೌನ್‌ ಲೋಡ್ ಮಾಡಿಕೊಂಡು ವೀಕ್ಷಿಸುವುದಲ್ಲದೆ ಆ ವಿಡಿಯೋಗಳನ್ನು ಬೇರೆಯವರಿಗೆ ಸಹ ಆತ ಕಳುಹಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಿಸುವವರ ಮೇಲೆ ಕೇಂದ್ರ ಗೃಹ ಇಲಾಖೆಯ ನ್ಯಾಷನಲ್‌ ಸೆಂಟರ್ ಫಾರ್ ಮಿಸ್ಸಿಂಗ್ ಅಂಡ್ ಎಕ್ಸ್‌ಪೊಲೈಟೆಡ್‌ (ಎನ್‌ಸಿಎಫ್‌ಎಂಇಸಿ) ವೆಬ್‌ಸೈಟ್‌ ನಿಗಾವಹಿಸಿದೆ. ಅಂತೆಯೇ ಇತ್ತೀಚಿಗೆ ನೂರ್‌ ಚಲನವಲನ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಇಲಾಖೆ, ಆತನ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿತು. ಈ ಸುಳಿವು ಆಧರಿಸಿ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.