ಸಾರಾಂಶ
ಕಳೆದ 20 ದಿನಗಳಿಂದ ಕಾಣೆಯಾಗಿದ್ದ ಅರ್ಪಿತಾರನ್ನು ಹುಡುಕಿಕೊಡುವಂತೆ ಪತಿ ಸಿದ್ದೇಗೌಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೋಮವಾರ ಬೆಳಗ್ಗೆ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ ಗಂಡನೊಂದಿಗೆ ಕಳಿಸಿಕೊಟ್ಟಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅರ್ಪಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ನೇಣು ಬಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಗ್ರಾಮದ ಸಿದ್ದೇಗೌಡರ ಪತ್ನಿ ಅರ್ಪಿತಾ (26) ಆತ್ಮಹತ್ಯೆ ಮಾಡಿಕೊಂಡವರು.ಕಳೆದ 20 ದಿನಗಳಿಂದ ಕಾಣೆಯಾಗಿದ್ದ ಅರ್ಪಿತಾರನ್ನು ಹುಡುಕಿಕೊಡುವಂತೆ ಪತಿ ಸಿದ್ದೇಗೌಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೋಮವಾರ ಬೆಳಗ್ಗೆ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ ಗಂಡನೊಂದಿಗೆ ಕಳಿಸಿಕೊಟ್ಟಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅರ್ಪಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಲಕ ನಾಪತ್ತೆಶ್ರೀರಂಗಪಟ್ಟಣ:ತಾಲೂಕಿನ ಕಡತನಾಳು ಗ್ರಾಮದ 14 ವರ್ಷದ ಬಾಲಕ ನಾಪತ್ತೆಯಾಗಿರುವ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಲೇ.ಮಂಜುನಾಥ್ ಪುತ್ರ ಸಚಿನ್ ಆ.9ರಂದು ಮನೆಯಿಂದ ಹೊರ ಹೋದವನು ಮರಳಿ ಬಂದಿಲ್ಲ. ಹುಡುಕಿಕೊಡುವಂತೆ ಬಾಲಕನ ತಾಯಿ ರಜಿನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಾಲಕ ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಬೆಕ್ಕಿನ ಕಣ್ಣು ಇದ್ದು ಮೈಮೇಲೆ ಬಿಳಿ ಟೀ ಶರ್ಟ್ ಹಾಗೂ ಮಿಲ್ಟ್ರಿ ಕಲರ್ ಪ್ಯಾಂಟ್ ಧರಿಸಿದ್ದಾನೆ. ಈ ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗಾಗಲಿ ಅಥವಾ ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ಕೋರಿದ್ದಾರೆ.