ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ : ಕಲ್ಲಿನಿಂದ ಹಲ್ಲೆಗೈದು ಚಿಂದಿ ಆಯುವವನ ಕೊಲೆ

| Published : Jul 18 2024, 01:38 AM IST / Updated: Jul 18 2024, 04:52 AM IST

ಸಾರಾಂಶ

ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 ಬೆಂಗಳೂರು :  ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯ ವಿವರ ಪತ್ತೆಯಾಗಿಲ್ಲ. ಸುಮಾರು 35-40 ವರ್ಷ ವಯೋಮಾನ ಇರಬಹುದು. ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಈತನನ್ನು ಸ್ಥಳೀಯರು ಡಿಕ್ಕಿ ಎಂದು ಕರೆಯುತ್ತಿದ್ದರು ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಸ್ವಾತಂತ್ರ್ಯ ಉದ್ಯಾನದ ಸಮೀಪದ ಕುರುಬರ ಹಾಸ್ಟೆಲ್‌ ಹಿಂಭಾಗದ ಬಿಬಿಎಂಪಿ ಕಸ ಹಾಕುವ ಸ್ಥಳದಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.

ಕೊಲೆಯಾದ ವ್ಯಕ್ತಿ ಸ್ವಾತಂತ್ರ್ಯ ಉದ್ಯಾನವನ ಸುತ್ತ-ಮುತ್ತ ಪ್ರದೇಶದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಮಂಗಳವಾರ ರಾತ್ರಿ ಬಿಬಿಎಂಪಿ ಕಸ ಹಾಕುವ ಜಾಗದಲ್ಲಿ ಮತ್ತೊಬ್ಬ ವ್ಯಕ್ತಿಯ ಜತೆಗೆ ಜಗಳವಾಗಿದ್ದು, ಈ ವೇಳೆ ಕಲ್ಲಿನಿಂದ ಹಲ್ಲೆಗೈದು ಕೊಲೆ ಮಾಡಿರುವ ಸಾಧ್ಯತೆಯಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸಂಬಂಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯಾದ ವ್ಯಕ್ತಿ ಮತ್ತು ಕೊಲೆ ಮಾಡಿದ ಆರೋಪಿಯ ಗುರುತು ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.