ಓ2 ಸಿನಿಮಾದ ಟ್ರೇಲರ್‌ ಬಿಡುಗಡೆ

| Published : Apr 05 2024, 01:02 AM IST / Updated: Apr 05 2024, 06:13 AM IST

ಸಾರಾಂಶ

ಅಶ್ವಿನಿ ಪುನೀತ್‌ ನಿರ್ಮಾಣದ ಓ2 ಸಿನಿಮಾದ ಟ್ರೇಲರ್‌ ಪಿಆರ್‌ಕೆ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

 ಸಿನಿವಾರ್ತೆ

ಸೈಕಲಾಜಿಕಲ್‌ ಥ್ರಿಲ್ಲರ್‌ ‘ಓ2’ ಸಿನಿಮಾದ ಟ್ರೇಲರ್‌ ಪಿಆರ್‌ಕೆ ಆಡಿಯೋ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ಏ.19ಕ್ಕೆ ಬಿಡುಗಡೆಯಾಗಲಿದೆ. ಆಶಿಕಾ ರಂಗನಾಥ್, ಪ್ರವೀಣ್‌ ತೇಜ್‌, ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇದೊಂದು ಮೆಡಿಕಲ್‌ ಥ್ರಿಲ್ಲರ್. ಜೊತೆಗೆ ಪ್ರೇಮಕಥೆಯೂ ಇದರಲ್ಲಿದೆ.

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ‘ಓ2 ಎಂಬ ವಿಭಿನ್ನ ಚಿತ್ರವನ್ನು ನಿರ್ಮಿಸಿರುವುದು ಹೆಮ್ಮೆ ತಂದಿದೆ. ಈ ಚಿತ್ರವನ್ನು ಪ್ರೇಕ್ಷಕರ ಮುಂದಿಡಲು ಕಾತರದಿಂದ ಕಾಯುತ್ತಿದ್ದೇನೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಸಂಸ್ಥೆಯ ಉದ್ದೇಶ. ಈ‌ ಚಿತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯುತ್ತದೆ ಎಂದು ನಂಬಿದ್ದೇನೆ’ ಎಂದರು.

ಈ ಚಿತ್ರವನ್ನು ರಾಘವ್ ನಾಯಕ್ ಹಾಗೂ ಪ್ರಶಾಂತ್ ರಾಜ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿವಾನ್ ರಾಧಾಕೃಷ್ಣ ಸಂಗೀತ ಸಂಯೋಜನೆ ಇದೆ. ಛಾಯಾಗ್ರಾಹಣ ನವೀನ್ ಕುಮಾರ್ ಎಸ್ ಅವರದು.