ಸಾರಾಂಶ
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ.
ಅಲ್ಲು ಅರ್ಜುನ್ ನಟನೆಯ ಪ್ಯಾನ್ ಇಂಡಿಯನ್ ಸಿನಿಮಾ ‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಈ ಪೋಸ್ಟರ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅದರ ಬೆನ್ನಲ್ಲೇ ನಿರ್ದೇಶಕ ಸುಕುಮಾರ್ ಜೊತೆಗೆ ಫಹಾದ್ ಪಾಸಿಲ್, ಬ್ರಹ್ಮ ಇರುವ ಮತ್ತೊಂದು ಫೋಟೋ ವೈರಲ್ ಆಗಿದೆ.
ಡಿಸೆಂಬರ್ 6ರಂದು ಬಿಡುಗಡೆಯಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಮುಗಿದಿದೆ ಎನ್ನಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳೂ ಬಹುತೇಕ ಮುಗಿದಿದ್ದು, ಸಿನಿಮಾ ಪ್ರಚಾರ ಕಾರ್ಯ ಶೀಘ್ರದಲ್ಲೇ ಶುರುವಾಗಲಿದೆ. ಅದರ ಮೊದಲ ಹೆಜ್ಜೆಯಾಗಿ ಅಲ್ಲು ಅರ್ಜುನ್ ಅವರು ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.