ಸಾರಾಂಶ
ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆಯಾದ 12 ದಿನಗಳಲ್ಲಿ ಜಗತ್ತಿನಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 757.73 ಕೋಟಿ ರು. ಗಳಿಕೆ ಕಂಡಿದೆ
ಮುಂಬೈ: ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾ ಬಿಡುಗಡೆಯಾದ 12 ದಿನಗಳಲ್ಲಿ ಜಗತ್ತಿನಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 757.73 ಕೋಟಿ ರು. ಗಳಿಕೆ ಕಂಡಿದೆ. ಡಿ.1 ರಂದು ಕನ್ನಡ, ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಪ್ಯಾನ್ ಇಂಡಿಯಾ ಚಿತ್ರ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ. ಅನೀಲ್ ಕಪೂರ್, ಬಾಬಿ ಡಿಯೋಲ್, ಸುರೇಶ್ ಒತ್ರಾಯ್ ಸೇರಿದಂತೆ ಹಲವು ಸ್ಟಾರ್‌ಗಳು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.