ಅನುಷ್ಕಾ ಶೆಟ್ಟಿ ನಟನೆಯ ಹೊಸ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆ

ಹಲವು ಸಮಯಗಳಿಂದ ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಳ್ಳದಿದ್ದ ಅನುಷ್ಕಾ ಶೆಟ್ಟಿ ವಿಶಿಷ್ಟ ಲುಕ್‌ನಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಘಾಟಿ’ ಸಿನಿಮಾದ ಫಸ್ಟ್ ಲುಕ್‌ ಟೀಸರ್‌ ಬಿಡುಗಡೆಯಾಗಿದೆ. ರಕ್ತರಂಜಿತ ಕೈಗಳಲ್ಲಿ ಭಂಗಿ ಸೇದುವ ಪೋಸ್ಟರ್‌ಗೆ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ನಲ್ಲಿದೆ.

ಮಾನವೀಯತೆ, ಜೀವನ ಹೋರಾಟ ಮತ್ತು ಮುಕ್ತಿಯ ಕುರಿತ ಕಥಾಹಂದರವ ಹೊಂದಿರುವ ಈ ಸಿನಿಮಾವನ್ನು ಕ್ರಿಷ್ ಜಾಗರ್ಲಮುಡಿ ನಿರ್ದೇಶನ ಮಾಡಿದ್ದಾರೆ. ರಾಜೀವ್ ರೆಡ್ಡಿ ಮತ್ತು ಸಾಯಿ ಬಾಬು ಜಾಗರ್ಲಮುಡಿ ನಿರ್ಮಾಪಕರು. ಸದ್ಯ ಈ ಸಸ್ಪೆನ್ಸ್, ಆ್ಯಕ್ಷನ್‌ ಥ್ರಿಲ್ಲರ್‌ನ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.