ಸಾರಾಂಶ
ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸಿರುವ ‘ಬಘೀರ’ ಚಿತ್ರದ ಟೀಸರ್ ಹೊಂಬಾಳೆ ಫಿಲಮ್ಸ್ ಯೂಟ್ಯೂಬ್ ನಲ್ಲಿ ಅನಾವರಣಗೊಂಡಿದ್ದು, ಭಾರಿ ಮೆಚ್ಚುಗೆ ಗಳಿಸಿದೆ. ಬಿಡುಗಡೆ ಆದ 10 ಗಂಟೆಗಳಲ್ಲಿ 3.5 ಮಿಲಿಯನ್ ವೀಕ್ಷಣೆ ಗಳಿಸಿದೆ.
ಕನ್ನಡಪ್ರಭ ಸಿನಿವಾರ್ತೆಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸಿರುವ ‘ಬಘೀರ’ ಚಿತ್ರದ ಟೀಸರ್ ಹೊಂಬಾಳೆ ಫಿಲಮ್ಸ್ ಯೂಟ್ಯೂಬ್ ನಲ್ಲಿ ಅನಾವರಣಗೊಂಡಿದ್ದು, ಭಾರಿ ಮೆಚ್ಚುಗೆ ಗಳಿಸಿದೆ. ಬಿಡುಗಡೆ ಆದ 10 ಗಂಟೆಗಳಲ್ಲಿ 3.5 ಮಿಲಿಯನ್ ವೀಕ್ಷಣೆ ಗಳಿಸಿದೆ.ಡಾ ಸೂರಿ ನಿರ್ದೇಶನದ ಈ ಚಿತ್ರಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ.ಅಭಿಮಾನಿಗಳ ಜತೆಗೆ ಹುಟ್ಟುಹಬ್ಬಈ ಬಾರಿ ಅಭಿಮಾನಿಗಳ ಜತೆಗೆ ನಟ ಶ್ರೀಮುರಳಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಶ್ರೀಮುರಳಿ ಹುಟ್ಟುಹಬ್ಬದ ಅಂಗವಾಗಿ ಸೇರಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ಪ್ರದರ್ಶನ ಮಾಡಲಾಯಿತು. ಅಭಿಮಾನಿಗಳ ಜೊತೆ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು.