ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಪೋಸ್ಟರ್‌ ಬಿಡುಗಡೆ

| Published : May 19 2024, 01:47 AM IST / Updated: May 19 2024, 07:42 AM IST

ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಪೋಸ್ಟರ್‌ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಅನ್ನು ಸಿಂಪಲ್ ಸುನಿ ಲಾಂಚ್‌ ಮಾಡಿದ್ದಾರೆ.

ಸಿನಿವಾರ್ತೆ

ದೀಕ್ಷಿತ್‌ ಶೆಟ್ಟಿ ಹಾಗೂ ಬೃಂದಾ ಆಚಾರ್ಯ ನಟನೆಯ ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ’ ಸಿನಿಮಾದ ಪೋಸ್ಟರ್‌ ಬಿಡುಗಡೆಯಾಗಿದೆ. ಸಿಂಪಲ್‌ ಸುನಿ ಈ ಸಿನಿಮಾದ ಪೋಸ್ಟರ್‌ ಅನಾವರಣ ಮಾಡಿದ್ದಾರೆ.

ಹೆಚ್.ಕೆ ಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಯುವ ನಿರ್ದೇಶಕ ಅಭಿಷೇಕ್‌ ಎಂ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಸಾಧುಕೋಕಿಲ, ಗೋಪಾಲಕೃಷ್ಣ ದೇಶಪಾಂಡೆ, ಉಷಾ ಭಂಡಾರಿ ತಾರಾಗಣದಲ್ಲಿದ್ದಾರೆ.

ಬ್ಯಾಂಕ್ ದರೋಡೆ ಮಾಡಲು ಹೊರಟವರ ಹಾಸ್ಯ ಕಥೆ ಈ ಸಿನಿಮಾದ್ದು. ತುಮಕೂರು ಹಾಗೂ ಚಿತ್ರದುರ್ಗದ ಸುತ್ತಮುತ್ತ ಸದ್ಯ ಶೇ.80ರಷ್ಟು ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ M ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ'''', ‘ಬಹುಪರಾಕ್'''' ಮತ್ತು ‘ಆಪರೇಷನ್ ಅಲಮೇಲಮ್ಮ'''' ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ.

 ''''ಪಿನಾಕ'''' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ''''ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. 

ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ ಬೆಂಗಳೂರು, ತುಮಕೂರು ಹಾಗು ಚಿತ್ರದುರ್ಗ ಸುತ್ತ 80 ಪ್ರತಿಶತ ಚಿತ್ರೀಕರಣ ಮುಗಿದಿದೆ‌‌. ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಹಾಗೆ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ

ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.