ಸಾರಾಂಶ
ದುನಿಯಾ ವಿಜಯ್ ನಿರ್ದೇಶನ, ನಟನೆಯ ಭೀಮ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ.
ಕನ್ನಡಪ್ರಭ ಸಿನಿವಾರ್ತೆ
ದುನಿಯಾ ವಿಜಯ್ ನಿರ್ದೇಶಿಸಿ, ನಟಿಸುತ್ತಿರುವ ‘ಭೀಮ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ವಿನೋಬನಗರದ ಗಲ್ಲಿಗಳಲ್ಲಿ ಕೊನೆಯ ದೃಶ್ಯದ ಶೂಟಿಂಗ್ ನಡೆಯಿತು. ನಾಯಕ ವಿಜಯ್ ಸೇರಿದಂತೆ ಇಡೀ ಚಿತ್ರತಂಡ ಈ ವೇಳೆ ಹಾಜರಿತ್ತು. ‘ಇಡೀ ಸಿನಿಮಾವನ್ನು ರಿಯಲಿಸ್ಟಿಕ್ ಆಗಿ ಚಿತ್ರೀಕರಿಸಲಾಗಿದೆ’ ಎಂದು ವಿಜಯ್ ತಿಳಿಸಿದರು. ರಂಗಭೂಮಿ ಪ್ರತಿಭೆ ಅಶ್ವಿನಿ ಈ ಸಿನಿಮಾದ ನಾಯಕಿ. ಅಚ್ಯುತ ಕುಮಾರ್, ರಂಗಾಯಣ ರಘು, ಕಾಕ್ರೋಚ್ ಸುಧಿ, ಕಲ್ಯಾಣಿ, ಪ್ರಿಯಾ ಷಟಮರ್ಶಣ ಮುಖ್ಯಪಾತ್ರಗಳಲ್ಲಿದ್ದಾರೆ. ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಪಕರು.