ಸಾರಾಂಶ
ಸಿನಿವಾರ್ತೆ
ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಲಿಂಕ್ ’ ಚಿತ್ರ 25 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಚಿತ್ರತಂಡ ಸಂಭ್ರಮಾಚರಣೆ ಮಾಡಿದೆ.
ದೀಕ್ಷಿತ್ ಶೆಟ್ಟಿ ಮಾತನಾಡಿ, ‘ಕನಸುಗಳನ್ನು ಇಟ್ಟುಕೊಂಡು ಮಾಡಿದ ಸಿನಿಮಾ. ಈ ರೀತಿ ಕತೆಯನ್ನು ನೋಡುತ್ತಾರೋ ಇಲ್ಲವೋ ಎನ್ನುವ ಅನುಮಾನ ಇತ್ತು. ಕೊನೆಗೂ ನಮ್ಮ ಚಿತ್ರವನ್ನು ನೋಡಿ ಮೆಚ್ಚಿಕೊಂಡರು. ಮುಂದಿನ ದಿನಗಳಲ್ಲಿ ಯಾವುದೇ ಒಂದು ಸೈನ್ಸ್ ಫಿಕ್ಷನ್ ಸಿನಿಮಾ ಆಗಬೇಕು ಎಂದರೆ ಅದಕ್ಕೆ ನಮ್ಮ ಚಿತ್ರ ಮಾದರಿಯಾಗುತ್ತದೆ’ ಎಂದರು.
ನಟಿ ಚೈತ್ರಾ ಆಚಾರ್, ‘ಬ್ಲಿಂಕ್ ನನ್ನ ಪಾಲಿಗೆ ಲಕ್ಕಿ ಸಿನಿಮಾ. ಈ ಚಿತ್ರದ ಶೂಟಿಂಗ್‌ನಲ್ಲಿ ಇರುವಾಗಲೇ ಸಪ್ತ ಸಾಗರದಾಚೆ ಎಲ್ಲೋ ತಂಡದಿಂದ ಕಾಲ್ ಬಂದಿತ್ತು. ಈ ಸಿನಿಮಾದ ಭಾಗವಾಗಿರುವುದು ಖುಷಿ ಕೊಟ್ಟಿದೆ’ ಎಂದರು.
ನಿರ್ದೇಶಕ ಶ್ರೀನಿಧಿ ಬೆಂಗಳೂರು, ‘ಬೆರಗು ಕಣ್ಣಿನಿಂದ ನಾನು ಈ ಕಲಾ ಪ್ರಪಂಚವನ್ನು ನೋಡುತ್ತಿದ್ದೇನೆ. ಹೊಸಬರ ಕನಸಿಗೆ ಬೆನ್ನುತಟ್ಟಿದ ಪ್ರತಿಯೊಬ್ಬರಿಗೆ ಧನ್ಯವಾದ’ ಎಂದರು.
ರವಿಚಂದ್ರ ಎ ಜೆ ನಿರ್ಮಾಣದ ಈ ಚಿತ್ರವು ಆಸ್ಟ್ರೇಲಿಯಾ, ಯುಎಸ್‌ಎ, ಯುಕೆ, ಐರ್ಲ್ಯಾಂಡ್, ಕೆನಡಾ, ಜರ್ಮನಿ, ಮಲೇಷ್ಯಾದಲ್ಲೂ ಬಿಡುಗಡೆಯಾಗಿದ್ದು ಒಳ್ಳೆಯ ಪ್ರತಿಕ್ರಿಯೆಗಳು ಕೇಳಿ ಬರುತ್ತಿವೆ ಎಂಬುದು ಚಿತ್ರತಂಡದ ಮಾತು.