ಸಾರಾಂಶ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ 31ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಸಿನಿವಾರ್ತೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ 31ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಿರ್ಧಾರಕ್ಕೆ ಬರಲಾಗಿದ್ದು, ಕಾಂತಾರ ಬಳಿಕ ಅತಿ ದೊಡ್ಡ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಸದ್ಯದಲ್ಲೇ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ಹೇಳಿದ್ದಾರೆ.
ಪ್ರಕಾಶ್ ವೀರ್ ನಿರ್ದೇಶಿಸುತ್ತಿರುವ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಬಿ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ರಚನಾ ರೈ ನಾಯಕಿ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು ,
ಶೋಭರಾಜ್ ನಟಿಸಿದ್ದಾರೆ.