ಸಿನಿವಾರ್ತೆ

ಕನ್ನಡದ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ದೀಕ್ಷಿತ್‌ ಶೆಟ್ಟಿ ಇದೀಗ ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್ ಫ್ರೆಂಡ್’ ಸಿನಿಮಾಕ್ಕೆ ನಾಯಕನಾಗಿದ್ದಾರೆ. ತೆಲುಗಿನ ಸ್ಟಾರ್‌ ನಟ ವಿಜಯ ದೇವರಕೊಂಡ ಈ ಸಿನಿಮಾದ ಟೀಸರ್‌ ಅನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ರಾಹುಲ್ ರವೀಂದ್ರನ್ ಈ ಚಿತ್ರದ ನಿರ್ದೇಶಕರು. ಸಿನಿಮಾದಲ್ಲಿ ಪ್ರೇಮಕಥೆ ಜೊತೆಗೆ ಭಾವಾನಾತ್ಮಕ ಅಂಶಗಳಿವೆ. ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಚಿತ್ರವನ್ನು ಅರ್ಪಣೆ ಮಾಡುತ್ತಿದ್ದಾರೆ.