ಸಾರಾಂಶ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಹಾಡಿನ ಚಿತ್ರೀಕರಣ ನಾಳೆಯಿಂದ (ಜು.13) ಥೈಲ್ಯಾಂಡ್‌ನಲ್ಲಿ ನಡೆಯಲಿದೆ. ಹತ್ತು ದಿನಗಳಿಗೂ ಹೆಚ್ಚು ಕಾಲ ಚಿತ್ರತಂಡ ಥೈಲ್ಯಾಂಡ್‌ನ ಫುಕೆಟ್‌ನಲ್ಲಿ ಚಿತ್ರೀಕರಣ ನಡೆಸಲಿದೆ.
ಸಿನಿವಾರ್ತೆ : ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಹಾಡಿನ ಚಿತ್ರೀಕರಣ ನಾಳೆಯಿಂದ (ಜು.13) ಥೈಲ್ಯಾಂಡ್‌ನಲ್ಲಿ ನಡೆಯಲಿದೆ. ಹತ್ತು ದಿನಗಳಿಗೂ ಹೆಚ್ಚು ಕಾಲ ಚಿತ್ರತಂಡ ಥೈಲ್ಯಾಂಡ್‌ನ ಫುಕೆಟ್‌ನಲ್ಲಿ ಚಿತ್ರೀಕರಣ ನಡೆಸಲಿದೆ.
ಹಿಂದೆ ಈ ಚಿತ್ರದ ಶೂಟಿಂಗ್ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆಸುವ ಪ್ಲಾನ್ ಆಗಿತ್ತು ಎನ್ನಲಾಗಿದೆ. ದರ್ಶನ್ ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಶೂಟಿಂಗ್ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಇರುವ ಹಿನ್ನೆಲೆಯಲ್ಲಿ ಅವರ ಹೆಚ್ಚಿನ ಸಿನಿಮಾಗಳ ಶೂಟಿಂಗ್ ಅಲ್ಲೇ ನಡೆದಿತ್ತು. ಇದೀಗ ಈ ಸಿನಿಮಾದ ಹಾಡಿನ ಚಿತ್ರೀಕರಣವನ್ನು ಅಲ್ಲೇ ನಡೆಸಲು ಯೋಜಿಸಲಾಗಿತ್ತು. ಆದರೆ ಈ ಬಾರಿ ದರ್ಶನ್ ಮೇಲೆ ಆರೋಪ ಇರುವ ಕಾರಣ ಸ್ವಿಟ್ಜರ್‌ಲ್ಯಾಂಡ್ ಸರ್ಕಾರ ವೀಸಾ ನಿರಾಕರಿಸಿದೆ.
ಈ ಹಿಂದೆ ಯುರೋಪ್ ಕೂಡ ವೀಸಾ ನಿರಾರಿಸಿತ್ತು ಎನ್ನಲಾಗಿದೆ. ಥೈಲ್ಯಾಂಡ್‌ನಲ್ಲಾದರೆ ಅಲ್ಲಿಗೆ ಹೋಗಿಯೇ ಪಡೆಯಬಹುದಾದ ವೀಸಾ ಆನ್ ಅರೈವಲ್ ವ್ಯವಸ್ಥೆ ಇರುವ ಕಾರಣ ಚಿತ್ರತಂಡ ಅಲ್ಲಿ ಚಿತ್ರೀಕರಣ ನಡೆಸಲು ಪ್ಲಾನ್ ಮಾಡಿದೆ. ಈ ಹಾಡಿನ ಚಿತ್ರೀಕರಣ ಮುಗಿದರೆ ‘ಡೆವಿಲ್’ ಸಿನಿಮಾದ ಶೂಟಿಂಗ್ ಸಂಪೂರ್ಣ ಮುಕ್ತಾಯಗೊಳ್ಳುತ್ತದೆ.
ಪ್ರಕಾಶ್ ವೀರ್ ನಿರ್ದೇಶನದ ‘ಡೆವಿಲ್’ ಸಿನಿಮಾಕ್ಕೆ ಜೆ ಜಯಮ್ಮ ನಿರ್ಮಾಪಕರು.