ಇಂದು ದಸರಾ ಚಲನಚಿತ್ರೋತ್ಸವದ ಪಾಸ್ ವಿತರಣೆ

| Published : Oct 09 2023, 12:45 AM IST

ಇಂದು ದಸರಾ ಚಲನಚಿತ್ರೋತ್ಸವದ ಪಾಸ್ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಇಂದು ದಸರಾ ಚಲನಚಿತ್ರೋತ್ಸವದ ಪಾಸ್ ವಿತರಣೆ
ಕನ್ನಡಪ್ರಭ ವಾರ್ತೆ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಚಲನಚಿತ್ರೋತ್ಸವ ಉಪ ಸಮಿತಿ ವತಿಯಿಂದ ಅ.16 ರಿಂದ 22 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಈ ಸಂಬಂಧ ಅ.9ರ ಬೆಳಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಿಸಲಾಗುವುದು. ಚಲನಚಿತ್ರೋತ್ಸವ ಪಾಸ್ ದರ ಸಾಮಾನ್ಯರಿಗೆ 500 ರೂ. ಗಳಾಗಿದ್ದು, ವಿದ್ಯಾರ್ಥಿಗಳಿಗೆ 300 ರೂ. ಆಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ. ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್ ಮೊ. 74115 64510 ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪ ಸಮಿತಿಯ ವಿಶೇಷಾಧಿಕಾರಿ ಎಂ.ಕೆ. ಸವಿತಾ ತಿಳಿಸಿದ್ದಾರೆ.