ಸಾರಾಂಶ
2016ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು ಹೌಸ್‌ಫುಲ್ ಶೋಗಳವರೆಗಿನ ಈ ಪಯಣ ಅದ್ಭುತ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ಸಿನಿವಾರ್ತೆ
‘2016ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು ಹೌಸ್‌ಫುಲ್ ಶೋಗಳವರೆಗಿನ ಈ ಪಯಣ ಅದ್ಭುತ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ರಿಷಬ್ ಶೆಟ್ಟಿ ಉಲ್ಲೇಖಿಸಿರುವ 2016ರ ಪೋಸ್ಟ್ ಸಹ ಈಗ ಟ್ರೆಂಡಿಂಗ್‌ನಲ್ಲಿದೆ. ‘ಅಂತೂ ಇಂತೂ ಅವರಿವರ ಕೈಕಾಲು ಹಿಡಿದು ಮಂಗಳೂರಿನ ಬಿಗ್ ಸಿನಿಮಾನಲ್ಲಿ ನಾಳೆಯಿಂದ ಸಂಜೆ 7ಗಂಟೆ ಶೋ ಸಿಕ್ಕಿದೆ. ನೋಡಲು ಇಚ್ಛಿಸುವವರು ನಾಳೆಗೆ ಟಿಕೆಟ್ ಬುಕ್ ಮಾಡಿ’ ಎಂದು ರಿಷಬ್ ಈ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದು, ಇದು ರಿಷಬ್ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ‘ರಿಕ್ಕಿ’ ಸಿನಿಮಾದ ಕುರಿತಾದ ಪೋಸ್ಟ್ ಆಗಿದೆ.