ಸಾರಾಂಶ
ಸೃಜನ್ ಲೋಕೇಶ್ ನಟನೆ, ನಿರ್ದೇಶನದ ‘ಜಿಎಸ್‌ಟಿ’ಚಿತ್ರ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕನ್ನಡಪ್ರಭ ಸಿನಿವಾರ್ತೆ
ಸೃಜನ್ ಲೋಕೇಶ್ ನಟನೆ, ನಿರ್ದೇಶನದ ‘ಜಿಎಸ್‌ಟಿ’ಚಿತ್ರ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಸೆಟ್‌ನಲ್ಲಿ ಹೆಚ್ಚಿನ ಚಿತ್ರೀಕರಣ ನಡೆದಿದೆ. ಡಬ್ಬಿಂಗ್ ಕೂಡ ಪೂರ್ಣವಾಗಿದೆ. ಸದ್ಯ ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಅಭಿನಯಿಸುತ್ತಿದ್ದಾರೆ. ರಜನಿ ಭಾರದ್ವಾಜ್ ನಾಯಕಿ. ಪ್ರಮೋದ್ ಶೆಟ್ಟಿ, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ, ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣ, ರಾಜಶೇಖರ್ ಸಂಭಾಷಣೆ ಚಿತ್ರಕ್ಕಿದೆ. ಸಂದೇಶ್ ಎನ್ ಸಿನಿಮಾ ನಿರ್ಮಿಸಿದ್ದಾರೆ.