ಸಾರಾಂಶ
ವಿಭಿನ್ನವಾದ ಹೆಸರು ಇಟ್ಟುಕೊಂಡಿರುವ ಗುಂಮ್ಟಿ ಚಿತ್ರದ ಶೀರ್ಷಿಕೆ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಆಯಿತು.
ಸಿನಿವಾರ್ತೆ
‘ಗುಂಮ್ಟಿ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಆಗಿದೆ. ಈ ಹಿಂದೆ ‘ಕತ್ತಲೆ ಕೋಣೆ’ ಹಾಗೂ ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಮೂರನೇ ಸಿನಿಮಾ ಇದು. ಕಂಟೆಂಟ್ ಆಧಾರಿತ ಚಿತ್ರಗಳನ್ನು ರೂಪಿಸುವುದರಲ್ಲಿ ಮುಂದಿರುವ ಸಂದೇಶ್ ಶೆಟ್ಟಿ ಆಜ್ರಿ ಈ ಬಾರಿ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.
ಸಿನಿಮಾ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ವಿಕಾಸ್ ಎಸ್. ಶೆಟ್ಟಿ ನಿರ್ಮಾಣದ ಈ ಚಿತ್ರದಲ್ಲಿ ವೈಷ್ಣವಿ ನಾಡಿಗ್ ನಾಯಕಿ. ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮುಖ್ಯ ಪಾತ್ರಧಾರಿಗಳು. ಅನೀಶ್ ಡಿಸೋಜಾ ಕ್ಯಾಮೆರಾ, ಮೋಹನ್ ಸಂಗೀತ ಇದೆ.