ಬ್ಯಾಕ್ ಬೆಂಚರ್ಸ್ ಚಿತ್ರದ ಹೋಳಿ ಹಾಡು ಬಿಡುಗಡೆ

| Published : Mar 29 2024, 12:45 AM IST

ಸಾರಾಂಶ

ಬ್ಯಾಕ್ ಬೆಂಚರ್ಸ್ ಚಿತ್ರಕ್ಕೆ ಶಂಕರ್ ಮಹಾದೇವನ್ ಹಾಡಿರುವ ಹೋಳಿ ಹಾಡು ಬಿಡುಗಡೆ ಆಗಿದೆ.

ರಮ್ಯ ನಿರ್ಮಾಣದ, ಬಿ.ಆರ್ ರಾಜಶೇಖರ್ ನಿರ್ದೇಶನದ ‘ಬ್ಯಾಕ್ ಬೆಂಚರ್ಸ್’ ಚಿತ್ರದ ಹೋಳಿ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹೃದಯಶಿವ ಬರೆದಿರುವ ಹಾಡನ್ನು ಶಂಕರ್ ಮಹದೇವನ್ ಹಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ.‘ಈ ಚಿತ್ರ ನಮ್ಮ ಕಾಲೇಜು ದಿನಗಳನ್ನು ನೆನಪಿಸುತ್ತದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ’ ಎಂದು ನಿರ್ದೇಶಕ ಬಿ.ಆರ್ ರಾಜಶೇಖರ್ ತಿಳಿಸಿದ್ದಾರೆ. ರಂಜನ್ ನರಸಿಂಹಮೂರ್ತಿ, ಜಿತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳಿಕರ್, ಮಾನ್ಯ ಗೌಡ, ಕುಂಕುಮ್, ಅನುಷ ಸುರೇಶ್ ತಾರಾಬಳಗದಲ್ಲಿದ್ದಾರೆ.