ಸಾರಾಂಶ
ಕೋಮಲ್ ನಟನೆಯ ‘ಕಾಲಾಯ ನಮಃ’ ಚಿತ್ರಕ್ಕೆ ಸಂಪೂರ್ಣವಾಗಿ ಶೂಟಿಂಗ್ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು, ಈ ಬಾರಿ ಬೇರೆ ರೀತಿಯ ಜಾನರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರುವ ಸೂಚನೆ ಕೊಟ್ಟಿದ್ದಾರೆ ಕೋಮಲ್ ಅವರು.
ಕನ್ನಡಪ್ರಭ ಸಿನಿವಾರ್ತೆ
ಕೋಮಲ್ ನಟನೆಯ ‘ಕಾಲಾಯ ನಮಃ’ ಚಿತ್ರಕ್ಕೆ ಸಂಪೂರ್ಣವಾಗಿ ಶೂಟಿಂಗ್ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು, ಈ ಬಾರಿ ಬೇರೆ ರೀತಿಯ ಜಾನರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರುವ ಸೂಚನೆ ಕೊಟ್ಟಿದ್ದಾರೆ ಕೋಮಲ್ ಅವರು.ಕೋಮಲ್ ಅವರ ಪತ್ನಿ ಅನಸೂಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಾಲ ನಿಲುವುದಿಲ್ಲ. ಅದೇ ರೀತಿ ಕಾಲ ಯಾರಿಗೂ ಕಾಯುವುದಿಲ್ಲ. ಯಾರಿಗೂ ಕಾಯದ ಕಾಲದ ಸುತ್ತಾ ಈ ಸಿನಿಮಾ ಕತೆ ಸಾಗುತ್ತದೆ. ಮತಿವಣ್ಣನ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಸಿಯಾ ಫಿರ್ದೋಸಿ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ನಟ ಜಗ್ಗೇಶ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ತಿಲಕ್ ಹಾಗೂ ಜಗ್ಗೇಶ್ ಅವರ ಪುತ್ರ ಯತಿರಾಜ್ ಕೂಡ ನಟಿಸಿದ್ದಾರೆ.