ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್‌ ಅನ್ನು ಸುದೀಪ್‌ ಬಿಡುಗಡೆ ಮಾಡಿ ಶುಭಹಾರೈಸಿದ್ದಾರೆ.

ಸಿನಿವಾರ್ತೆ

ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್‌ ಅನ್ನು ಸುದೀಪ್‌ ಬಿಡುಗಡೆ ಮಾಡಿ ಶುಭಹಾರೈಸಿದ್ದಾರೆ.

‘ಇದು ಭಕ್ತಿಯ ಭಾವದ ಜೊತೆಗೆ ಸಿನಿಮ್ಯಾಟಿಕ್ ಅನುಭವ ಕಟ್ಟಿಕೊಡುವ ಚಿತ್ರ’ ಎಂದು ಸುದೀಪ್ ಹೇಳಿದ್ದಾರೆ.

ಈ ಸಿನಿಮಾ ಜೂ.27ಕ್ಕೆ ತೆರೆಗೆ ಬರಲಿದೆ.

ಈ ಹಿಂದೆ ಡಾ ರಾಜ್‌ಕುಮಾರ್‌ ನಟನೆಯಲ್ಲಿ ಬಹಳ ಜನಪ್ರಿಯವಾಗಿದ್ದ‘ಬೇಡರ ಕಣ್ಣಪ್ಪ’ ಕಥೆಯನ್ನು ಈ ಸಿನಿಮಾದಲ್ಲಿ ಹೆಚ್ಚು ಕಮರ್ಷಿಯಲ್ ಮಾದರಿಯಲ್ಲಿ ಕಟ್ಟಿಕೊಡಲಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಶಿವನ ಪಾತ್ರದಲ್ಲಿ ಹಾಗೂ ಕಾಜಲ್‌ ಅಗರ್ವಾಲ್ ಪಾರ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಈ ಚಿತ್ರಕ್ಕೆ ಡಾ ಮೋಹನ್ ಬಾಬು ಬಂಡವಾಳ ಹೂಡಿದ್ದಾರೆ.