ಸಾರಾಂಶ
ಕನ್ನಡದ ಅತಿ ಹೆಚ್ಚು ಗಳಿಕೆಯ ಸಿನಿಮಾಗಳಲ್ಲಿ ಒಂದಾಗಿರುವ ‘ಕಾಂತಾರ 1’ ಸಿನಿಮಾ ಅ.31ರಂದು ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಯಾದ ಒಂದು ತಿಂಗಳ ಒಳಗೆ ಈ ಸಿನಿಮಾ ಓಟಿಟಿಗೆ ಬರುತ್ತಿರುವುದು ಅಚ್ಚರಿ ಹುಟ್ಟಿಸಿದೆ.
ಬೆಂಗಳೂರು : ಕನ್ನಡದ ಅತಿ ಹೆಚ್ಚು ಗಳಿಕೆಯ ಸಿನಿಮಾಗಳಲ್ಲಿ ಒಂದಾಗಿರುವ ‘ಕಾಂತಾರ 1’ ಸಿನಿಮಾ ಅ.31ರಂದು ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಯಾದ ಒಂದು ತಿಂಗಳ ಒಳಗೆ ಈ ಸಿನಿಮಾ ಓಟಿಟಿಗೆ ಬರುತ್ತಿರುವುದು ಅಚ್ಚರಿ ಹುಟ್ಟಿಸಿದೆ.
ಪ್ರೈಮ್ ವೀಡಿಯೋ ‘ಕಾಂತಾರ 1’ ಬಿಡುಗಡೆ ವಿಚಾರವನ್ನು ಅಧಿಕೃತವಾಗಿ ಘೋಷಿಸಿದ್ದು, ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಿಂದಿ ಆವೃತ್ತಿ ಕುರಿತು ಯಾವುದೇ ಮಾಹಿತಿ ನೀಡಿಲ್ಲ. 125 ಕೋಟಿ ರು.ಗೆ ಮಾರಾಟ ಆಗಿರುವುದರಿಂದ ‘ಕಾಂತಾರ 1’ ಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುತ್ತಿರುವಾಗಲೇ ಓಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಿನಿಮಾ 813 ಕೋಟಿ ರು. ಸಂಗ್ರಹ ಮಾಡಿ ಹೆಗ್ಗಳಿಕೆ
ಇತ್ತೀಚೆಗೆ ಸಿನಿಮಾ 813 ಕೋಟಿ ರು. ಸಂಗ್ರಹ ಮಾಡಿ, ಈ ವರ್ಷದ ಅತಿ ಹೆಚ್ಚು ಗಳಿಕೆಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಜೊತೆಗೆ ಚಿತ್ರಮಂದಿರಗಳಲ್ಲಿ ಈಗಲೂ ಜನಭರಿತ ಪ್ರದರ್ಶನ ಕಾಣುತ್ತಿದ್ದು, 1000 ಕೋಟಿ ರು. ಸಂಗ್ರಹಿಸುವ ನಿರೀಕ್ಷೆ ಇದೆ. ಈ ಮಧ್ಯೆ ಸಿನಿಮಾ ಓಟಿಟಿಗೆ ಬರುತ್ತಿರುವುದು ಬಹುತೇಕರ ಹರ್ಷಕ್ಕೆ ಮತ್ತು ಅಚ್ಚರಿಗೆ ಕಾರಣವಾಗಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಈ ಚಿತ್ರ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರುಕ್ಮಿಣಿ ವಸಂತ್, ಗುಲ್ಷನ್ ದೇವಯ್ಯ, ಜಯರಾಮ್ ನಟಿಸಿದ್ದಾರೆ. ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.
ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಸಿನಿಮಾ
- ಇನ್ನೂ ಚಿತ್ರಮಂದಿರದಲ್ಲಿ ಹೌಸ್‌ಫುಲ್ ಪ್ರದರ್ಶನ
- ಇಷ್ಟಾದ್ರೂ ಓಟಿಟಿಯಲ್ಲಿ ರಿಷಬ್ ಶೆಟ್ಟಿ ಚಿತ್ರ ಬಿಡುಗಡೆ
;Resize=(690,390))
)
)

;Resize=(128,128))
;Resize=(128,128))
;Resize=(128,128))