ಸಾರಾಂಶ
ಕಾಂತಾರ ಸಿನಿಮಾದ ಶೂಟಿಂಗ್ ಆಲ್‌ಮೋಸ್ಟ್ ಕಂಪ್ಲೀಟ್ ಆಗಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸಿನಿಮಾದ ಶೂಟಿಂಗ್ ಮುಕ್ತಾಯದತ್ತ ಸಾಗಿದೆ. ಕುಂದಾಪುರದ ಕೆರಾಡಿಯಲ್ಲಿ ಬೃಹತ್ ಸೆಟ್ ಹಾಕಿ ಶೂಟಿಂಗ್ ನಡೆದಿದ್ದು, ಮೂಲಗಳ ಪ್ರಕಾರ ಇನ್ನೂ ಹದಿನೈದರಿಂದ ಇಪ್ಪತ್ತು ದಿನಗಳ ಚಿತ್ರೀಕರಣವಷ್ಟೇ ಬಾಕಿ ಇದೆ.
‘ಕಾಂತಾರ ಅಧ್ಯಾಯ 1’ ಚಿತ್ರದಲ್ಲಿ ವಿಎಫ್‌ಎಕ್ಸ್ ಕೆಲಸ ಹೆಚ್ಚಿದೆ. ಹಾಲಿವುಡ್‌ನ ‘ಲಯನ್ ಕಿಂಗ್’ನಂಥಾ ಸಿನಿಮಾಕ್ಕೆ ವಿಎಫ್‌ಎಕ್ಸ್ ವರ್ಕ್ ಮಾಡಿದ ದಿ ಮಿಲ್ ಹಾಗೂ ಎಂಪಿಸಿ ಕಂಪನಿಗಳು ಈ ಸಿನಿಮಾಕ್ಕೆ ವಿಎಫ್‌ಎಕ್ಸ್ ಕೆಲಸ ಮಾಡಲಿವೆ.
ಪೋಸ್ಟ್ ಪ್ರೊಡಕ್ಷನ್‌ಗೆ ಸಾಕಷ್ಟು ಸಮಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸುಮಾರು 125 ಕೋಟಿ ರು.ಗೂ ಅಧಿಕ ವೆಚ್ಚದಲ್ಲಿ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ಏಪ್ರಿಲ್ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದೆ.