ಸಾರಾಂಶ
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದಲ್ಲಿಕಿಚ್ಚ ಸುದೀಪ್ ಅತಿಥಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಸಿನಿವಾರ್ತೆ
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದಲ್ಲಿಕಿಚ್ಚ ಸುದೀಪ್ ಅತಿಥಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಈ ಬಗ್ಗೆ ನಿರ್ದೇಶಕ ಪ್ರೇಮ್, ‘ಇನ್ಮೇಲೆ ಗಾಸಿಪ್ ಮಾಡೋ ಹಾಗಿಲ್ಲ. ಸುದೀಪ್ ಅವರೀಗ ಅಧಿಕೃತವಾಗಿ ನಮ್ಮ ಟೀಮ್್‌ನಲ್ಲಿ ಒಬ್ಬರಾಗಿದ್ದಾರೆ. ಲವ್ ಯೂ ಮೈ ಡಾರ್ಲಿಂಗ್ ಸುದೀಪ್’ ಎಂದಿದ್ದಾರೆ.
ಸದ್ಯ ‘ಕೆಡಿ’ ಸಿನಿಮಾದ ಚಿತ್ರೀಕರಣ ಹೈದರಾಬಾದ್ನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ಅದ್ದೂರಿ ಸೆಟ್ ನಿರ್ಮಾಣ ಮಾಡಲಾಗಿದೆ.
ಕೆವಿಎನ್ ಪ್ರೊಡಕ್ಷನ್ಸ್ ಈ ಸಿನಿಮಾ ನಿರ್ಮಿಸುತ್ತಿದೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ತಾರಾಗಣದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ 5 ಭಾಷೆಗಳಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ದೀಪಾವಳಿಗೆ ಈ ಚಿತ್ರ ಬಿಡುಗಡೆಯಾಗಲಿದೆ.
70ರ ದಶಕದ ಬೆಂಗಳೂರಿನ ಭೂಗತಲೋಕದ ಕಥೆಯನ್ನು ಪ್ರೇಮ್ ಈ ಚಿತ್ರದಲ್ಲಿ ಕಟ್ಟಿಕೊಡುತ್ತಿದ್ದಾರೆ.