ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡು ಇಂದು(ಏ.5) ಬಿಡುಗಡೆ.

ಕಿರುತೆರೆಯಲ್ಲಿ ಅಪಾರ ಜನಪ್ರಿಯತೆ ಪಡೆದು ಇದೀಗ ಹಿರಿತೆರೆಯಲ್ಲೂ ತನ್ನ ಛಾಪು ಮೂಡಿಸುತ್ತಿರುವ ಕಿರಣ್‌ ರಾಜ್‌ ನಟನೆಯ ಹೊಸ ಸಿನಿಮಾ ‘ಭರ್ಜರಿ ಗಂಡು’ ಇಂದು ಬಿಡುಗಡೆ ಆಗುತ್ತಿದೆ.

ಗ್ರಾಮೀಣ ಭಾಗದ ಪ್ರೇಮಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಕಿರಣ್ ರಾಜ್ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಯಶಾ ಶಿವಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಮದನ್ ಗೌಡ ಹಾಗೂ ಅನಿಲ್ ಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಪ್ರಸಿದ್ಧ್ ನಿರ್ದೇಶಿಸಿದ್ದಾರೆ.

ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್, ಸೌರಭ್ ಕುಲಕರ್ಣಿ, ಮಡೆನೂರು ಮನು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.