ಸಾರಾಂಶ
ಮರ್ಯಾದೆ ಪ್ರಶ್ನೆ ಸಿನಿಮಾದಲ್ಲಿ ನಟಿ ತೇಜು ಸೇಲ್ಸ್ ಗರ್ಲ್ ಪಾತ್ರದಲ್ಲಿ ನಟಿಸಿದ್ದಾರೆ.
ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾದ ನಾಯಕಿಯಾಗಿದ್ದ ತೇಜು ಬೆಳವಾಡಿ ಇದೀಗ ‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ಸೇಲ್ಸ್ ಗರ್ಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೇಲ್ಸ್ ಗರ್ಲ್ ಲಕ್ಷ್ಮೀಯಾಗಿ ಅವರ ಪಾತ್ರದ ಪೋಸ್ಟರ್ ಬಿಡುಗಡೆಯಾಗಿದೆ.
ಆರ್ ಜೆ ಪ್ರದೀಪ್ ಸಕ್ಕತ್ ಸ್ಟುಡಿಯೋ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗರಾಜ್ ಸೋಮಯಾಜಿ ನಿರ್ದೇಶಕರು. ಸುನೀಲ್ ರಾವ್, ಶೈನ್ ಶೆಟ್ಟಿ, ರಾಕೇಶ್ ಅಡಿಗ, ಪೂರ್ಣಚಂದ್ರ ಮೈಸೂರು ನಟಿಸಿದ್ದಾರೆ. ನವೆಂಬರ್ 22ಕ್ಕೆ ಸಿನಿಮಾ ತೆರೆ ಕಾಣಲಿದೆ.