ಸಾರಾಂಶ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸೀಕ್ವೆಲ್‌ನಲ್ಲಿ ಮೋಹನ್‌ಲಾಲ್ ನಟನೆ ಸಾಧ್ಯತೆ
ಕನ್ನಡಪ್ರಭ ಸಿನಿವಾರ್ತೆರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 2’ ಸಿನಿಮಾದಲ್ಲಿ ಮಲಯಾಳಂ ಸಿನಿಮಾರಂಗದ ದಂತಕತೆ ಮೋಹನ್‌ಲಾಲ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ರಿಷಬ್ ತಂದೆಯ ಪಾತ್ರದಲ್ಲಿ ಮೋಹನ್‌ಲಾಲ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಪ್ರಸ್ತುತ ಮೋಹನ್‌ಲಾಲ್ ಹಾಗೂ ರಿಷಬ್ ಶೆಟ್ಟಿ ಜೊತೆಗಿರುವ ಹಳೆಯ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದೆ. ಆದರೆ ಈ ಕುರಿತು ಚಿತ್ರತಂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ಕುಂದಾಪುರದಲ್ಲಿ ‘ಕಾಂತಾರ 2’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.