ನಾಳೆಯಿಂದ ನೀನಾಸಂ ನಾಟಕೋತ್ಸವ

| Published : Oct 29 2023, 01:01 AM IST

ನಾಳೆಯಿಂದ ನೀನಾಸಂ ನಾಟಕೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಈ ತಿಂಗಳ 30 ಮತ್ತು 31 ರಂದು ಪ್ರತಿದಿನ ಸಂಜೆ 7 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನೀನಾಸಂ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಝೆನ್ ಟೀಮ್ ನ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಈ ನಾಟಕೋತ್ಸವವನ್ನು ಸೋಮವಾರ ಸಂಜೆ 7 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ, ತುಮಕೂರು ಈ ತಿಂಗಳ 30 ಮತ್ತು 31 ರಂದು ಪ್ರತಿದಿನ ಸಂಜೆ 7 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನೀನಾಸಂ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಝೆನ್ ಟೀಮ್ ನ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಈ ನಾಟಕೋತ್ಸವವನ್ನು ಸೋಮವಾರ ಸಂಜೆ 7 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ ಸಿಇಒ ಜಿ. ಪ್ರಭು, ಶಾಸಕ ಜ್ಯೋತಿ ಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕೊಪ್ಪಳ ಶಾಖೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸೋಮರೆಡ್ಡಿ ಅಳವಂಡಿ ಹಾಗೂ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ ವಹಿಸಲಿದ್ದಾರೆ. ಶ್ರೀದೇವಿ ಶಿಕ್ಷಣ ಸಂಸ್ಥೆಯ ಡಾ. ಎಂ.ಆರ್. ಹುಲಿನಾಯ್ಕರ್‌ ಅಧ್ಯಕ್ಷತೆವಹಿಸಲಿದ್ದಾರೆ.