ಸಾರಾಂಶ
ಸ್ವತಂತ್ರ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಡುತ್ತಿರುವ ಸಚಿನ್ ವಾಲಿ ನಿರ್ದೇಶನದ ಹೊಸ ಸಿನಿಮಾಗೆ ನಿರೂಪ್ ಭಂಡಾರಿ ನಾಯಕನಾಗಿದ್ದಾರೆ.
ಕನ್ನಡಪ್ರಭ ಸಿನಿವಾರ್ತೆ
ಸ್ವತಂತ್ರ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಡುತ್ತಿರುವ ಸಚಿನ್ ವಾಲಿ ನಿರ್ದೇಶನದ ಹೊಸ ಸಿನಿಮಾಗೆ ನಿರೂಪ್ ಭಂಡಾರಿ ನಾಯಕನಾಗಿದ್ದಾರೆ. ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಥೆ ಚಿತ್ರದ್ದು. ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಆಗಿ ಮೂಡಿಬರಲಿದೆ. ಸದ್ಯ ಚಿತ್ರದ ಸ್ಕ್ರಿಪ್ಟ್ ಪೂಜೆ ಮುಗಿದಿದೆ. ಅಂಕಿತ್ ಸೋನಿಗಾರ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಪ್ರಶಾಂತ್ ಮುಲಗೆ ಸಹ ನಿರ್ಮಾಪಕರು. ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.