ನನ್ನನ್ನು ಒಂಟಿಯಾಗಿರಲು ಬಿಡಿ ಎಂದಿದ್ಯಾಕೆ ನಿಶ್ವಿಕಾ ನಾಯ್ಡು?

 ಸಿನಿವಾರ್ತೆ‘

ನನ್ನ ಪ್ರೀತಿಯ ನಾಯಿ ಲಿಯೋ ಗತಿಸಿದ ನೋವಿನಿಂದ ಇನ್ನೂ ಹೊರಬಂದಿಲ್ಲ. ಹೀಗಾಗಿ ಈ ಬಾರಿ ಜನ್ಮದಿನವನ್ನು ಆಚರಿಸುತ್ತಿಲ್ಲ’ ಎಂದು ಕರಟಕ ದಮನಕ ನಟಿ ನಿಶ್ವಿಕಾ ನಾಯ್ಡು ಹೇಳಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿರುವ ನಿಶ್ವಿಕಾ, ‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾದ ಕೆಲವು ಏರುಪೇರುಗಳು ಆಗಿವೆ. 

ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ಮನಸ್ಸಿಗೆ ತುಂಬಾ ಆಳವಾದ ನೋವನ್ನುಂಟುಮಾಡಿದೆ. ಅದರಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸದಿರಲು ನಾನು ನಿರ್ಧರಿಸಿದ್ದೇನೆ’ ಎಂದು ನಿಶ್ವಿಕಾ ನಾಯ್ಡು ಬರೆದುಕೊಂಡಿದ್ದಾರೆ. ‘ದಯವಿಟ್ಟು ನನ್ನ ಭಾವನೆಗಳಿಗೆ ಬೆಲೆ ಕೊಟ್ಟು ಈ ಬಾರಿ ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬರಬೇಡಿ ಅಥವಾ ಉಡುಗೊರೆಗಳನ್ನು ತರಬೇಡಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ’ಎಂದು ನಟಿ

ಅಭಿಮಾನಿಗಳಲ್ಲಿ ಕೋರಿಕೊಂಡಿದ್ದಾರೆ.