ಸಾರಾಂಶ
ರವಿ ಗೌಡ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಐ ಯಾಮ್ ಗಾಡ್’ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕುವ ಮೂಲಕ ನಟ ದಿಗಂತ್ ಹಾಗೂ ನಿವೇದಿತಾ ಗೌಡ ಅವರು ಕಾಣಿಸಿಕೊಂಡಿದ್ದಾರೆ.
ಸಿನಿವಾರ್ತೆ
ರವಿ ಗೌಡ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಐ ಯಾಮ್ ಗಾಡ್’ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕುವ ಮೂಲಕ ನಟ ದಿಗಂತ್ ಹಾಗೂ ನಿವೇದಿತಾ ಗೌಡ ಅವರು ಕಾಣಿಸಿಕೊಂಡಿದ್ದಾರೆ.
ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಮೊದಲ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆ ಆಗಿತ್ತು.ಈಗ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ ಆಗಿದ್ದು, ಈ ಹಾಡಿನಲ್ಲಿ ನಟ ದಿಗಂತ್ ಹಾಗೂ ನಿವೇದಿತಾ ಗೌಡ ಹೆಜ್ಜೆ ಹಾಕಿದ್ದಾರೆ. ಶಶಾಂಕ್ ಶೇಷಗಿರಿ, ಅನಿರುದ್ಧ ಶಾಸ್ತ್ರಿ ಹಾಗೂ ಐಶ್ವರ್ಯ ರಂಗರಾಜನ್ ಅವರು ಈ ಹಾಡನ್ನು ಹಾಡಿದ್ದಾರೆ. ನವೆಂಬರ್ 7ಕ್ಕೆ ತೆರೆಗೆ ಬರಲಿರುವ ಈ ಚಿತ್ರದಲ್ಲಿ ನಾಯಕಿಯಾಗಿ ವಿತೇಜಾ ಪರೀಕ್ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಹಿರಿಯ ನಟ ಅವಿನಾಶ್, ಅರುಣ ಬಾಲರಾಜ್ ಚಿತ್ರದ ಉಳಿದ ಪಾತ್ರಧಾರಿಗಳು.