ಸಾರಾಂಶ
ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವ ಉದ್ದೇಶ ಸದ್ಯಕ್ಕೆ ನಮ್ಮ ಮುಂದೆ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವ ಉದ್ದೇಶ ಸದ್ಯಕ್ಕೆ ನಮ್ಮ ಮುಂದೆ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.
ದರ್ಶನ್ ಕೃತ್ಯವನ್ನು ಚಿತ್ರರಂಗ ಖಂಡಿಸುತ್ತದೆ. ಕಾನೂನು ಪ್ರಕ್ರಿಯೆ ನೋಡಿಕೊಂಡು ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದೆ.
ರಾಜ್ಯದ ವಿವಿಧೆಡೆ ಪ್ರತಿಭಟನೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಕನ್ನಡ ಚಲನಚಿತ್ರರಂಗದಿಂದಲೇ ನಿಷೇಧಿಸಬೇಕು. ಅವರು ಹಾಗೂ ಅವರ ಸಹಚರರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಡ್ಯ, ದಾವಣಗೆರೆ, ಚನ್ನಪಟ್ಟಣ ಸೇರಿ ವಿವಿಧೆಡೆ ಗುರುವಾರ ಪ್ರತಿಭಟನೆಗಳು ನಡೆದಿವೆ.