ಸಾರಾಂಶ
ಲೂಸ್‌ಮಾದ ಯೋಗಿ ನಟನೆಯ ರೋಜಿ ಚಿತ್ರಕ್ಕೆ ಒರಟ ಪ್ರಶಾಂತ್ ಜತೆಯಾಗಿದ್ದಾರೆ. ಈ ಚಿತ್ರದಲ್ಲಿ ಅವರು ಸ್ವಾಮಿ ಅಣ್ಣ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಕನ್ನಡಪ್ರಭ ಸಿನಿವಾರ್ತೆಲೂಸ್‌ಮಾದ ಯೋಗಿ ಅಭಿನಯದ, ಶೂನ್ಯ ನಿರ್ದೇಶನದ ‘ರೋಜಿ’ ಚಿತ್ರದಲ್ಲಿ ಒರಟ ಪ್ರಶಾಂತ್ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಸ್ವಾಮಿ ಅಣ್ಣ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ.
ಒರಟ ಪ್ರಶಾಂತ್ ಮಾತನಾಡಿ, ‘ನನಗೆ ಬಹಳ ಅವಕಾಶಗಳು ಬಂದವು. ಆದರೆ, ನಾನು ಒಪ್ಪಿರಲಿಲ್ಲ. ಶೂನ್ಯ ಅವರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಹಾಗಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಯೋಗಿ ಅವರ ಜತೆಗೆ ಅಭಿನಯಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರುತ್ತಿದೆ’ ಎಂದರು.ಸಂಗೀತ ನಿರ್ದೇಶಕ ಗುರುಕಿರಣ್, ನಿರ್ಮಾಪಕರಾದ ಡಿ.ವೈ. ರಾಜೇಶ್, ಡಿ.ವೈ. ವಿನೋದ್, ಛಾಯಾಗ್ರಾಹಕ ಎಸ್.ಕೆ. ರಾವ್ ಹಾಗೂ ಸಂಕಲನಕಾರ ಹರೀಶ್ ಕೊಮ್ಮೆ ಸುದ್ದಿಗೋಷ್ಠಿಯಲ್ಲಿ ಇದ್ದರು. ಶ್ರೀನಗರ ಕಿಟ್ಟಿ ಹಾಗೂ ‘ಲಿಯೋ’ ಚಿತ್ರದ ಸ್ಯಾಂಡಿ ಕುಮಾರ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೊಂದು ಸ್ಟೈಲಿಶ್ ಗ್ಯಾಂಗ್‌ಸ್ಟರ್ ಡ್ರಾಮಾ ಸಿನಿಮಾ ಆಗಿದೆ.