ಬಡವರಿಗೆ ಉಚಿತವಾಗಿ, ಕಡಿಮೆ ಖರ್ಚಿನಲ್ಲಿ ಉತ್ತಮ ಆರೋಗ್ಯ ಸೇವೆ ದೊರೆಯಲಿಬಡವರಿಗೆ ಉಚಿತವಾಗಿ, ಕಡಿಮೆ ಖರ್ಚಿನಲ್ಲಿ ಉತ್ತಮ ಆರೋಗ್ಯ ಸೇವೆ ದೊರೆಯಲಿ,ಮೈಸೂರುಬಡವರಿಗೆ ಉಚಿತವಾಗಿ ಹಾಗೂ ಕಡಿಮೆ ಖರ್ಚಿನಲ್ಲಿ ಆರೋಗ್ಯ ಸೇವೆ ದೊರೆಯಬೇಕು. ಇದು ನಮ್ಮ ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನಗರದ ಪಿಕೆಟಿಬಿ ಅಸ್ಪತ್ರೆ ಆವರಣದಲ್ಲಿ ಮೈಸೂರು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಸೇರಿದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.