ಸಾರಾಂಶ
ಕೋವಿಡ್ ಕಾಲದ ಮಾನವೀಯ ನೆಲೆಗಟ್ಟಿನ ಫೋಟೋ ಚಿತ್ರವನ್ನು ನಿರ್ದಿಗಂತ ಸಂಸ್ಥೆಯ ಮೂಲಕ ಪ್ರಕಾಶ್ ರಾಜ್ ಅರ್ಪಿಸುತ್ತಿದ್ದಾರೆ.
ಕನ್ನಡಪ್ರಭ ಸಿನಿವಾರ್ತೆಹಿಂದಿನ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಪಡೆದ ‘ಫೋಟೋ’ ಚಿತ್ರ ಥಿಯೇಟರ್‌ಗೆ ಬರಲು ಸಜ್ಜಾಗಿದೆ. ಈ ಸಿನಿಮಾವನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅರ್ಪಣೆ ಮಾಡುತ್ತಿದ್ದಾರೆ. ಕೋವಿಡ್ ಕಾಲದ ಮಾನವೀಯ ನೆಲೆಗಟ್ಟಿನ ಈ ಚಿತ್ರವನ್ನು ನಿರ್ದಿಗಂತ ಸಂಸ್ಥೆಯ ಮೂಲಕ ಪ್ರಕಾಶ್ ರಾಜ್ ಅರ್ಪಿಸುತ್ತಿದ್ದಾರೆ. ಇದು ರಾಯಚೂರು ಮೂಲದ ಯುವ ನಿರ್ದೇಶಕ ಉತ್ಸವ್ ಗೋನವಾರ ಚೊಚ್ಚಲ ಪ್ರಯತ್ನ. ಲಾಕ್‌ಡೌನ್ ಕಾಲಘಟ್ಟದ ಈ ಸಿನಿಮಾದಲ್ಲಿ ಅಪ್ಪ-ಮಗನ ಬಾಂಧವ್ಯ, ಭಾವನಾತ್ಮಕ ಎಳೆ ಇದೆ.
ಮಸಾರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್ ಮತ್ತು ವೀರೇಶ್ ಗೋನವಾರ ನಟಿಸಿದ್ದಾರೆ. ದಿನೇಶ್ ದಿವಾಕರನ್ ಛಾಯಾಗ್ರಹಣ ಮತ್ತು ರವಿ ಹಿರೇಮಠ್ ಹಿನ್ನೆಲೆ ಸಂಗೀತ, ಶಿವರಾಜ್ ಮೆಹೂ ಸಂಕಲನವಿದೆ.