ಸಾರಾಂಶ
ಪ್ರಿಯಾಂಕಾ ಚೋಪ್ರಾ ತೆಲಂಗಾಣದ ಚಿಲ್ಕೂರು ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಸಿನಿವಾರ್ತೆ
ಹಾಲಿವುಡ್, ಬಾಲಿವುಡ್‌ನಲ್ಲೆಲ್ಲ ಕಮಾಲ್ ಮಾಡಿರುವ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಇದೀಗ ತೆಲಂಗಾಣದ ಚಿಲ್ಕೂರು ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ‘ಬಾಲಾಜಿ ದರ್ಶನದೊಂದಿಗೆ ಹೊಸ ಅಧ್ಯಾಯ ಆರಂಭವಾಗಿದೆ. ನಮ್ಮೆಲ್ಲರ ಹೃದಯ ಶಾಂತಿಯಿಂದ ತುಂಬುವಂತಾಗಲಿ. ಎಲ್ಲೆಡೆ ಸಂತೋಷ, ಸಮೃದ್ಧಿ ನೆಲೆಸಲಿ’ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.
ಜೊತೆಗೆ ರಾಮ್ ಚರಣ್ ಪತ್ನಿ ಉಪಾಸನಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಎಸ್.ಎಸ್. ರಾಜಮೌಳಿ ಹಾಗೂ ಮಹೇಶ್ ಬಾಬು ಕಾಂಬಿನೇಶನ್‌ನ ಪ್ಯಾನ್ ವರ್ಲ್ಡ್ ಸಿನಿಮಾದಲ್ಲಿ ಪ್ರಿಯಾಂಕಾ ನಟಿಸುತ್ತಿದ್ದು, ಆ ಸಿನಿಮಾ ಕೆಲಸಕ್ಕಾಗಿ ಹೈದರಾಬಾದ್‌ಗೆ ಬಂದಿದ್ದಾರೆ ಎನ್ನಲಾಗಿದೆ.