ಸಾರಾಂಶ
ಹೊಸಬರ ಸಿನಿಮಾ ಪುಕ್ಸಟ್ಟೆ ಪೈಸ ಏ.19ಕ್ಕೆ ರಿಲೀಸ್
ಸಿನಿವಾರ್ತೆ
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾ ಏ. 19 ರಂದು ತೆರೆಗೆ ಬರುತ್ತಿದೆ. ಮಧುಸೂದನ ಎ. ಎಸ್ ಈ ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧುಸೂದನ, ‘ಕೆಲ ವರ್ಷಗಳ ಹಿಂದೆ ನಡೆದ ಹಣದ ಹಗರಣವನ್ನು ಮೂಲವಾಗಿಟ್ಟು ಈ ಸಿನಿಮಾ ಮಾಡಿದ್ದೇವೆ. ಸಿನಿಮಾದ ಟೈಟಲ್ಲೇ ಹೇಳುವಂತೆ ಪುಕ್ಸಟ್ಟೆ ಹಣದ ಮೇಲಿನ ಆಸೆಯಿಂದ ಅದರ ಹಿಂದೆ ಬಿದ್ದವರ ಒದ್ದಾಟ, ಪರದಾಟ ಹೇಗಿರುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ಮನರಂಜನಾತ್ಮಕವಾಗಿ ಹೇಳಿದ್ದೇವೆ.
ಇದೊಂದು ಕಾಮಿಡಿ, ಥ್ರಿಲ್ಲರ್ ಶೈಲಿಯ ಸಿನಿಮಾ’ ಎಂದು ವಿವರಣೆ ನೀಡಿದರು.ಭರತ್ ಶೆಟ್ಟಿ, ಅಕ್ಷತಾ ಕುಕಿ, ಮಹೇಶ್ ಬಾಬು, ಸಯ್ಯದ್, ರಕ್ಷಿತಾ ಮಲ್ಲಿಕಾರ್ಜುನ್, ಉಮೇಶ್, ಗಜಾ, ಮಂಜೇಗೌಡ, ಥಾಮಸ್, ಸೂರ್ಯ, ಸಂತು ಅಭಿನಯಿಸಿದ್ದಾರೆ. ವಿಶ್ವಾಸ್ ಕೌಶಿಕ್ ಸಂಗೀತ, ಮಯೂರ್ ಆರ್. ಶೆಟ್ಟಿ, ವೇಲ್ ಮುರುಗನ್ ಛಾಯಾಗ್ರಹಣ, ನಿಶಿತ್ ಪೂಜಾರಿ ಸಂಕಲನವಿದೆ.