ಸಾರಾಂಶ
ಪುನೀತ್ ರಾಜ್‌ಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು(ಮಾ.17) ಪುನೀತ್ ರಾಜ್‌ಕುಮಾರ್ ಕುಟುಂಬ ಮತ್ತು ಅಭಿಮಾನಿ ಸಮೂಹ ಅದ್ದೂರಿಯಿಂದ ಆಚರಿಸಿದೆ.
ಕನ್ನಡಪ್ರಭ ಸಿನಿವಾರ್ತೆ
ಪುನೀತ್ ರಾಜ್‌ಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು(ಮಾ.17) ಪುನೀತ್ ರಾಜ್‌ಕುಮಾರ್ ಕುಟುಂಬ ಮತ್ತು ಅಭಿಮಾನಿ ಸಮೂಹ ಅದ್ದೂರಿಯಿಂದ ಆಚರಿಸಿದೆ.
ಮಾರ್ಚ್ 16 ಮಧ್ಯರಾತ್ರಿಯಿಂದಲೇ ಅಭಿಮಾನಿ ಸಮೂಹ ಪುನೀತ್ ರಾಜ್‌ಕುಮಾರ್ ಸಮಾಧಿ ಬಳಿ ನೆರೆದಿತ್ತು. ಸಮಾಧಿ ಮುಂದೆ ಕೇಕ್ ಕತ್ತರಿಸಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದರು.
ಮಾ.17ರ ಬೆಳಿಗ್ಗೆ ರಾಘವೇಂದ್ರ ರಾಜ್‌ಕುಮಾರ್ ಅವರ ಕುಟುಂಬ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿತು. ಪುನೀತ್ ರಾಜ್‌ಕುಮಾರ್ ಪುತ್ರಿ ಮತ್ತು ಕುಟುಂಬ ಕೂಡ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೊಡ್ಮನೆಯಿಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯಾದ್ಯಂತ ಇರುವ ಪುನೀತ್ ಅಭಿಮಾನಿಗಳು ಪುನೀತ್ ಹುಟ್ಟುಹಬ್ಬ ಆಚರಿಸಿದ್ದಾರೆ.
ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಪುನೀತ್‌ರನ್ನು ನೆನಪಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿ ಪುನೀತ್‌ರನ್ನು ಸ್ಮರಿಸಿಕೊಂಡಿದ್ದಾರೆ.