ಸಾರಾಂಶ
ಮತ್ತೊಂದು ತೆಲುಗು ಚಿತ್ರಕ್ಕೆ ನಟ ದುನಿಯಾ ವಿಜಯ್ ಎಂಟ್ರಿ ಆಗಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ.
ಕನ್ನಡಪ್ರಭ ಸಿನಿವಾರ್ತೆ
ವಿಜಯ್ ಸೇತುಪತಿ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶಿಸುತ್ತಿದ್ದು, ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಬಾಲಿವುಡ್‌ನ ಟಬು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.ಜೂನ್‌ನಿಂದ ಚಿತ್ರಕ್ಕೆ ಶೂಟಿಂಗ್ ನಡೆಯಲಿದೆ ಎನ್ನಲಾಗಿದೆ. ಈ ಮೂಲಕ ನಂದಮೂರಿ ಬಾಲಕೃಷ್ಣ ನಟನೆಯ ‘ವೀರ ಸಿಂಹಾ ರೆಡ್ಡಿ’ ಸಿನಿಮಾ ಬಳಿಕ ಎರಡನೇ ತೆಲುಗು ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಇದರ ಜೊತೆಗೆ ಸುಂದರ್ ಸಿ ನಿರ್ದೇಶನದ ತಮಿಳಿನ ‘ಮೂಕುತಿ ಅಮ್ಮನ್ 2’ ಚಿತ್ರದಲ್ಲೂ ನಟಿಸಲಿದ್ದಾರೆ. ಒಟ್ಟಾರೆ ವಿಜಯ್ ಪರಭಾಷೆಯಲ್ಲಿ ಬೇಡಿಕೆಯ ನಟ ಎನ್ನಿಸಿಕೊಳ್ಳುತ್ತಿದ್ದಾರೆ.