ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ವಿಶ್ವಾದ್ಯಂತ 12,000 ಸ್ಕ್ರೀನ್‌ಗಳಲ್ಲಿ ಬಿಡುಗಡೆ

| Published : Nov 30 2024, 12:45 AM IST / Updated: Nov 30 2024, 05:11 AM IST

Pushpa 2 The Rule
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ವಿಶ್ವಾದ್ಯಂತ 12,000 ಸ್ಕ್ರೀನ್‌ಗಳಲ್ಲಿ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಪುಷ್ಪ ಸಿನಿಮಾ 12,000 ಸ್ಕ್ರೀನ್‌ಗಳಲ್ಲಿ ರಿಲೀಸ್‌

 ಸಿನಿವಾರ್ತೆ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ವಿಶ್ವಾದ್ಯಂತ 12,000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗುತ್ತಿದೆ. ಮುಂಬೈನಲ್ಲಿ ನಡೆದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ರವಿಶಂಕರ್‌ ಎಲಮಾನ್ಚಿಲಿ ಈ ವಿಚಾರ ತಿಳಿಸಿದ್ದಾರೆ. ಕೆಜಿಎಫ್‌ 2 ಹತ್ತು ಸಾವಿರ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇಷ್ಟು ದೊಡ್ಡ ಸಂಖ್ಯೆಯ ಸ್ಕ್ರೀನ್​ಗಳಲ್ಲಿ ಬಿಡುಗಡೆ ಆದ ಭಾರತದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೂ ಚಿತ್ರ ಪಾತ್ರವಾಗಿದೆ. ದೇಶದಲ್ಲೇ 8,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. 3 ಗಂಟೆ 20 ನಿಮಿಷಗಳ ಈ ಸುದೀರ್ಘ ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್‌ ಸಿಕ್ಕಿದ್ದು ಡಿ.5ಕ್ಕೆ ವಿಶ್ವಾದ್ಯಂತ ತೆರೆ ಕಾಣಲಿದೆ. ಸುಕುಮಾರ್ ಈ ಅದ್ದೂರಿ ಸಿನಿಮಾಕ್ಕೆ ಆ್ಯಕ್ಷನ್ ಕಟ್‌ ಹೇಳಿದ್ದಾರೆ.