ಸಾರಾಂಶ
ನಿರ್ಮಾಪಕ ದಿ.ರಾಮು, ನಿರ್ದೇಶಕ ಬಿ ಎಸ್ ಲಿಂಗದೇವರು, ನಟ ಡಾಲಿ ಧನಂಜಯ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ನೀಡುವ ವಾರ್ಷಿಕ ಪ್ರಶಸ್ತಿ ಘೋಷಣೆಯಾಗಿದೆ.
ಕನ್ನಡಪ್ರಭ ಸಿನಿವಾರ್ತೆ
ನಿರ್ಮಾಪಕ ದಿ.ರಾಮು, ನಿರ್ದೇಶಕ ಬಿ ಎಸ್ ಲಿಂಗದೇವರು, ನಟ ಡಾಲಿ ಧನಂಜಯ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ನೀಡುವ ವಾರ್ಷಿಕ ಪ್ರಶಸ್ತಿ ಘೋಷಣೆಯಾಗಿದೆ.
ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 27ರಂದು ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿರಿಯ ನಿರ್ಮಾಪಕ ದಿ. ರಾಮು, ಹಿರಿಯ ಪತ್ರಕರ್ತ ಮುರಳೀಧರ ಖಜಾನೆ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ, ಹಿನ್ನೆಲೆ ಗಾಯಕ ಹೇಮಂತ್ ಕುಮಾರ್ ಅವರಿಗೆ ಡಾ. ರಾಜ್ ಕುಮಾರ್ ಪ್ರಶಸ್ತಿ, ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಆರ್ ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ, ಕಲಾವಿದೆ ಜಯಲಕ್ಷ್ಮಿ ಪಿ ಅವರಿಗೆ ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ, ಜೋ ಕೋಸ್ಟ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ, ಹೇಮಂತ್ ರಾವ್ ಅವರಿಗೆ ಅತ್ಯುತ್ತಮ ಕಥಾಲೇಖಕ ಪ್ರಶಸ್ತಿ ಘೋಷಣೆಯಾಗಿದೆ.
ವಿವಿಧ ಪ್ರಶಸ್ತಿಗಳಿಗೆ ನಿರ್ದೇಶಕ ಬಿ ಎಸ್ ಲಿಂಗದೇವರು, ಪತ್ರಕರ್ತ ಶರಣು ಹುಲ್ಲೂರು, ಸಿಂಧೂ ಶ್ರೀನಿವಾಸಮೂರ್ತಿ, ಡಾಲಿ ಧನಂಜಯ, ಹಿರಿಯ ನಟ ಸುಂದರ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂದರ್ಭ ರಾಷ್ಟ್ರಪ್ರಶಸ್ತಿ ವಿಜೇತ ಪತ್ರಕರ್ತ ಬಿ.ಎನ್. ಸುಬ್ರಹ್ಮಣ್ಯ, ಕಲಾವಿದರಾದ ರಕ್ಷಿತ್ ಶೆಟ್ಟಿ ಹಾಗೂ ಅನಿರುದ್ಧ್ ಜತ್ಕರ್ ಅವರಿಗೆ ಗೌರವ ಸನ್ಮಾನ ನಡೆಯಲಿದೆ ಎಂದು ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುಖ್ಯಸ್ಥ ಸುಧೀಂದ್ರ ವೆಂಕಟೇಶ್ ತಿಳಿಸಿದ್ದಾರೆ.