ಸೂಪರ್‌ಸ್ಟಾರ್ ರಜನಿಕಾಂತ್ ಅಪರೂಪದ ವಿದ್ಯಮಾನವೊಂದರಲ್ಲಿ ‘ಜೈಲರ್ 2’ ಚಿತ್ರವನ್ನು ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ಕುಳಿತು ವೀಕ್ಷಿಸಿದ್ದಾರೆ. ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಬಳಿಕ ರಜನಿಕಾಂತ್ ಅವರು ಥಿಯೇಟರ್‌ನಲ್ಲಿ ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿದಂತಾಗಿದೆ.

ಸಿನಿವಾರ್ತೆ

ಈ ಕುರಿತು ಚಿತ್ರದ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ವಿಡಿಯೋ ಹಂಚಿಕೊಂಡಿದ್ದು, ‘40 ವರ್ಷಗಳಲ್ಲೇ ಮೊದಲ ಬಾರಿಗೆ ರಜನಿಕಾಂತ್ ಬೆಳ್ಳಿತೆರೆಯಲ್ಲಿ ‘ಜೈಲರ್ 2’ ಚಿತ್ರವನ್ನು ಅಭಿಮಾನಿಗಳ ಜತೆ ಕಣ್ತುಂಬಿಕೊಂಡಿದ್ದಾರೆ’ ಎಂದು ತಿಳಿಸಿದೆ.

ಚೆನ್ನೈನ ಪ್ರತಿಷ್ಠಿತ ಐಮ್ಯಾಕ್ಸ್ ಚಿತ್ರಮಂದಿರದಲ್ಲಿ ರಜನಿಕಾಂತ್ ಸಿನಿಮಾ ವೀಕ್ಷಿಸಿದ ವಿಡಿಯೋ ವೈರಲ್ ಆಗಿದೆ. ಚಿತ್ರಮಂದಿರಕ್ಕೆ ಪ್ರವೇಶಿಸಿದ ರಜನಿ, ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ನಿರ್ದೇಶಕ ನೆಲ್ಸನ್ ಅವರನ್ನು ಆತ್ಮೀಯವಾಗಿ ಆಲಂಗಿಸಿ, ಶೋ ಮುಗಿದ ನಂತರ ಎಲ್ಲರಿಗೂ ಧನ್ಯವಾದ ತಿಳಿಸಿ ತೆರಳಿದರು.

600 ಕೋಟಿ ರೂ. ಕ್ಲಬ್ ಸೇರಿದ ಜೈಲರ್ 2

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ 600 ಕೋಟಿ ರು. ಕ್ಲಬ್ ಸೇರಿದೆ. ಈ ಸಿನಿಮಾದ ಈಗಿನ ಗಳಿಕೆ 600 ಕೋಟಿ ರೂ. ದಾಟಿರಬಹುದು ಎಂದು ಅಂದಾಜಿಸಲಾಗಿದೆ.