ಸಾರಾಂಶ
ರಿಷಬ್ ಶೆಟ್ಟಿ ನಿರ್ಮಾಣದ ಹಾಸ್ಯ ಸಿನಿಮಾ ಲಾಫಿಂಗ್ ಬುದ್ಧ ಚಿತ್ರೀಕರಣ ಮುಗಿದಿದೆ.
ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಲಾಫಿಂಗ್ ಬುದ್ಧ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಭರತ್ ರಾಜ್ ಈ ಸಿನಿಮಾದ ನಿರ್ದೇಶಕರು. ಪ್ರಮೋದ್ ಶೆಟ್ಟಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೇಜು ಬೆಳವಾಡಿ, ಸುಂದರ್ ರಾಜ್ ಮುಖ್ಯ ಪಾತ್ರದಲ್ಲಿದ್ದಾರೆ.
ಇದೊಂದು ಮೆಲು ಹಾಸ್ಯದಿಂದ ಕೂಡಿದ ಚಿತ್ರವಾಗಿದ್ದು, ಪೊಲೀಸರ ವೃತ್ತಿ ಬದುಕಿನ ಮೇಲೆ ಬೆಳಕು ಚೆಲ್ಲುತ್ತದೆ. ‘ಜುಲೈ ವೇಳೆ ಸಿನಿಮಾ ಬಿಡುಗಡೆ ಮಾಡುವ ಪ್ಲಾನ್ ಇದೆ’ ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ.ಮಲಯಾಳಂ, ತಮಿಳು ಸಿನಿಮಾಗಳಿಗೆ ಮ್ಯೂಸಿಕ್ ಮಾಡುತ್ತಿದ್ದ ವಿಷ್ಣು ವಿಜಯ್ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಬಂದಿದ್ದಾರೆ. ಚಂದ್ರಶೇಖರನ್ ಸಿನಿಮಾಟೋಗ್ರಫಿ, ಕೆ ಎಂ ಪ್ರಕಾಶ್ ಸಂಕಲನ ಚಿತ್ರಕ್ಕಿದೆ.